ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ಮಹತ್ವದ ಕ್ರಮ ಕೈಗೊಂಡಿದ್ದು, ಮುಂದಿನ ವರ್ಷದೊಳಗೆ ಎಲ್ಲ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ ಜಾರಿಗೆ ತರಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ನಗರದಲ್ಲಿ ಭಾನುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಯಲಕ್ಷ್ಮಿ ಬಿ. ಅವರು ಕನ್ನಡಕ್ಕೆ ಅನುವಾದಿಸಿರುವ ಕಂಚ ಐಲಯ್ಯ ಅವರ ‘ಶೂದ್ರ ಬಂಡಾಯ’ ಪುಸ್ತಕ ಜನಾರ್ಪಣೆಗೊಳಿಸಿ ಮಾತನಾಡಿದರು.

‘ಈಗಾಗಲೇ ಹಲವು ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ ಅನುಷ್ಠಾನಗೊಳಿಸಲಾಗಿದೆ. ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಆರಂಭಿಸುವುದಾಗಿ ಘೋಷಿಸಿದಾಗ ಕನ್ನಡ ವಿರೋಧಿ ಎಂದು ಟೀಕಿಸಿದರು. ಅದಕ್ಕೆ ತಲೆಕೆಡಿಸಿಕೊಳ್ಳಲಿಲ್ಲ. ನಾನು ಕನ್ನಡ ವಿರೋಧಿ ಅಲ್ಲ. ಕನ್ನಡಕ್ಕೆ ಆದ್ಯತೆ ನೀಡಲಾಗುವುದು’ ಎಂದರು.

‘ಈ ಬಾರಿ ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಉತ್ತಮ ಫಲಿತಾಂಶ ಬಂದಿದೆ. ನಕಲು ಮಾಡಲು ಅವಕಾಶ ನೀಡಿಲ್ಲ. ನಕಲು ಮಾಡಿ ಉತ್ತೀರ್ಣರಾದವರು ಜೀವನದಲ್ಲಿ ಮುಂದೆ ಬರಲು ಆಗುವುದಿಲ್ಲ. ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುತ್ತೇವೆ. ಅದನ್ನು ಶಿಕ್ಷಣ ಮೂಲಕ ಕಾರ್ಯರೂಪಕ್ಕೆ ತರುತ್ತೇವೆ’ ಎಂದರು.

‘ನಾನು ಶಿಕ್ಷಣ ಸಚಿವನಾದಾಗ ನನ್ನ ಕನ್ನಡ ಭಾಷೆಯ ಬಗ್ಗೆ ಟೀಕೆ ಮಾಡಿದರು. ಇದರಲ್ಲಿ ನನ್ನ ತಪ್ಪಿಲ್ಲ. ನನಗೆ ಕನ್ನಡ ಹೇಳಿ ಕೊಟ್ಟವರ ತಪ್ಪು. ಅವರನ್ನು ಹುಡುಕುತ್ತಿದ್ದೇನೆ. ಅವರಿಗೆ ಏನೂ ಮಾಡುವುದಿಲ್ಲ. ಸರಿಯಾಗಿ ಹೇಳಿ ಕೊಟ್ಟಿದ್ದರೆ ಕಲಿಯುತ್ತಿದ್ಧೆ. ಪ್ರಾಥಮಿಕ ಶಿಕ್ಷಣವನ್ನು ಶಿವಮೊಗ್ಗ ಮತ್ತು ಬೆಂಗಳೂರಿನಲ್ಲಿ ಪಡೆದೆ. ಅಲ್ಲಿ ಇಂಗ್ಲಿಷ್ ಅನ್ನು ಕನ್ನಡದಲ್ಲಿ, ಕನ್ನಡವನ್ನು ಇಂಗ್ಲಿಷ್ನಲ್ಲಿ ಕಲಿಸುತ್ತಿದ್ದರು’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.