ಬೆಂಗಳೂರು: ಪ್ರತಿ ನಿತ್ಯ 300 ಟನ್ ಘನತ್ಯಾಜ್ಯವನ್ನು ಬಳಸಿಕೊಂಡು ಬಯೊ ಸಿಎನ್ಜಿ (ಕಂಪ್ರೆಸ್ಡ್ ನ್ಯಾಚುರಲ್ ಗ್ಯಾಸ್) ಉತ್ಪಾದಿಸಲು 18 ಎಕರೆ ಭೂಮಿಯನ್ನು 25 ವರ್ಷಗಳಿಗೆ ಗುತ್ತಿಗೆ ನೀಡಲು ಸಚಿವ ಸಂಪುಟ ಅನುಮೋದನೆ ನೀಡಿದೆ.

ದಕ್ಷಿಣ ತಾಲ್ಲೂಕು ಬೇಗೂರು ಹೋಬಳಿಯ ಹರಳಗುಂಟೆ ಗ್ರಾಮದಲ್ಲಿ ಹಿಂದಿನ ಬಿಬಿಎಂಪಿ ಮಾಲೀಕತ್ವದಲ್ಲಿರುವ ಸರ್ವೆ ನಂ. 39, 45, 46ರ ಒಟ್ಟು ವಿಸ್ತೀರ್ಣ 29.29 ಎಕರೆಯಲ್ಲಿ 10 ಎಕರೆ ಜಮೀನು ಹಾಗೂ ಕರ್ನಾಟಕ ಸಾವಯವ ಗೊಬ್ಬರ ಅಭಿವೃದ್ಧಿ ನಿಗಮದ (ಕೆಸಿಡಿಸಿ) ಮಾಲೀಕತ್ವದಲ್ಲಿರುವ ಸರ್ವೆ ನಂ. 39, 40, 45, 46ರ ಎಂಟು ಎಕರೆ ಜಮೀನನ್ನು ಗೇಲ್ ಇಂಡಿಯಾ ಸಂಸ್ಥೆಗೆ ಗುತ್ತಿಗೆ ನೀಡಲು ಸಮ್ಮತಿಸಲಾಗಿದೆ.

ಪ್ರತಿನಿತ್ಯ 300 ಟನ್ ಘನತ್ಯಾಜ್ಯವನ್ನು ಬಳಸಿಕೊಂಡು ಬಯೊ ಸಿಎನ್ಜಿ ಉತ್ಪಾದಿಸುವ ಘಟಕವನ್ನು ಗೇಲ್ ಸಂಸ್ಥೆ ಸ್ಥಾಪಿಸಲಿದೆ. ಮುಂದಿನ ದಿನಗಳಲ್ಲಿ ಈ ಘಟಕದ ಸಾಮರ್ಥ್ಯವನ್ನು 500 ಟನ್ಗೆ ವಿಸ್ತರಿಸಲೂ ಅನುಮೋದನೆ ನಿಡಲಾಗಿದೆ. ಕಂದಾಯ ಇಲಾಖೆ ಹಾಗೂ ಬಿಎಸ್ಡಬ್ಲ್ಯುಎಂಎಲ್ ಜಂಟಿ ಸರ್ವೆ ನಡೆಸಿ ಭೂಮಿಯನ್ನು ಹಸ್ತಾಂತರಿಸಬೇಕು. ಭವಿಷ್ಯದಲ್ಲಿ ಉದ್ಭವಿಸಬಹುದಾದ ಕಾರ್ಯಾಚರಣೆಯಲ್ಲಿನ ತೊಡಕುಗಳನ್ನು ಬಗೆಹರಿಸಲು ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯವರನ್ನು ಪ್ರಾಧಿಕಾರವನ್ನಾಗಿಸಲು ಸಚಿವ ಸಂಪುಟ ನಿರ್ಧರಿಸಿದೆ.

ಎರಡು ಆಸ್ಪತ್ರೆ: ಯಲಹಂಕದ ಬೆಳ್ಳಹಳ್ಳಿಯಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿದ್ದ 200 ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆಯನ್ನು ನಿರ್ಮಿಸುವ ಬದಲು, ತಲಾ 100 ಹಾಸಿಗೆಗಳ ಎರಡು ಆಸ್ಪತ್ರೆಗಳನ್ನು ರಾಜ್ಯ ಸರ್ಕಾರದ ಅನುದಾನದಲ್ಲಿ ನಿರ್ಮಿಸಲು ಸಚಿವ ಸಂಪುಟ ನಿರ್ಣಯಿಸಿದೆ.

ಯಲಹಂಕದ ಬೆಳ್ಳಹಳ್ಳಿ ಸರ್ವೆ ನಂ.55ರ ಐದು ಎಕರೆ ಜಮೀನಿನಲ್ಲಿ ₹50 ಕೋಟಿ ವೆಚ್ಚದಲ್ಲಿ ಹಾಗೂ ಹೆಬ್ಬಾಳ ವಿಧಾನಸಭೆ ಕ್ಷೇತ್ರದ ಪಶುಸಂಗೋಪನೆ ಮತ್ತು ಕೃಷಿ ಇಲಾಖೆಯ ಆವರಣದಲ್ಲಿ ₹50 ಕೋಟಿ ವೆಚ್ಚದಲ್ಲಿ ತಲಾ 100 ಹಾಸಿಗೆಗಳ ಸಾಮರ್ಥ್ಯದ ಅತ್ಯಾಧುನಿಕ ಆಸ್ಪತ್ರೆಗಳನ್ನು ನಿರ್ಮಿಸುವ ಕಾಮಗಾರಿಗಳ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆ ನೀಡುವ ಅಧಿಕಾರವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಯವರಿಗೆ ನೀಡಲು ಸಚಿವ ಸಂಪುಟ ತೀರ್ಮಾನಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.