ಮಂಗಳವಾರ, ಸೆಪ್ಟೆಂಬರ್ 21, 2021
22 °C

ಜೀವ ವೈವಿಧ್ಯ ರಕ್ಷಣೆ ಎಲ್ಲರ ಹೊಣೆ: ಅನಿತಾ ಅರೇಕಲ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಜಾಗತಿಕ ತಾಪಮಾನ ಏರಿಕೆಯಾಗುತ್ತಿರುವ ಕಾರಣ ಜೀವಸಂಕುಲವೇ ಅಪಾಯದಲ್ಲಿದೆ. ಜೀವ ವೈವಿಧ್ಯದ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಬೇಕು’ ಎಂದು ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಅನಿತಾ ಅರೇಕಲ್ ಹೇಳಿದರು.

ಕರ್ನಾಟಕ ಜೀವ ವೈವಿಧ್ಯ ಮಂಡಳಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ನಗರ ಸಾಮಾಜಿಕ ಅರಣ್ಯ ವಿಭಾಗದಿಂದ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಜೀವ ವೈವಿಧ್ಯ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

‘ಜನರ ಆರೋಗ್ಯದ ಜತೆಗೆ ಜೀವ ವೈವಿಧ್ಯ ಕಾಪಾಡುವಂತಹ ಜೀವ ಸಂಕುಲವನ್ನು ರಕ್ಷಣೆ ಮಾಡಬೇಕು. ಸಾವಯವ ಪದ್ಧತಿಯ ಮೂಲಕ ಪಾರಂಪರಿಕ ಕೃಷಿಗೆ ಒತ್ತು ನೀಡಿದರೆ ಪೋಷಕಾಂಶದ ಜತೆಗೆ ಜೀವವೈವಿಧ್ಯದ ರಕ್ಷಣೆಯೂ ಸಾಧ್ಯ’ ಎಂದು ಪ್ರತಿಪಾದಿಸಿದರು.

‘ಇದಕ್ಕಾಗಿ ಗ್ರಾಮ ಮಟ್ಟದಲ್ಲಿ ಜೀವವೈವಿಧ್ಯ ನಿರ್ವಹಣಾ ಸಮಿತಿಗಳನ್ನು ರಚಿಸುವ ಮೂಲಕವೂ ಜಾಗೃತಿ ಮೂಡಿಸುವ ಕೆಲಸವಾಗಬೇಕು’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು