ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀರೂರು ಮತ್ತು ರಾಮಗಿರಿ ರೈಲು ತಾತ್ಕಾಲಿಕ ನಿಲುಗಡೆ ಮುಂದುವರಿಕೆ

Published 27 ಮಾರ್ಚ್ 2024, 15:59 IST
Last Updated 27 ಮಾರ್ಚ್ 2024, 15:59 IST
ಅಕ್ಷರ ಗಾತ್ರ

ಬೆಂಗಳೂರು: ಬೀರೂರು ಮತ್ತು ರಾಮಗಿರಿ ನಿಲ್ದಾಣಗಳಲ್ಲಿ ಇರುವ ರೈಲುಗಳ ತಾತ್ಕಾಲಿಕ ನಿಲುಗಡೆಯನ್ನು ಮುಂದುವರಿಸಲು ನೈರುತ್ಯ ರೈಲ್ವೆ ನಿರ್ಧರಿಸಿದೆ.

ಯಶವಂತಪುರ-ಬಿಕಾನೇರ್ ನಿಲ್ದಾಣಗಳ ನಡುವೆ ವಾರಕ್ಕೆರಡು ಸಲ ಸಂಚರಿಸುವ ಯಶವಂತಪುರ-ಬಿಕಾನೇರ್-ಯಶವಂತಪುರ ಎಕ್ಸ್‌ಪ್ರೆಸ್ ರೈಲು ಬೀರೂರು ನಿಲ್ದಾಣದಲ್ಲಿ ಒಂದು ನಿಮಿಷದ ತಾತ್ಕಾಲಿಕ ನಿಲುಗಡೆಯನ್ನು ಮಾರ್ಚ್‌ 31ರವರೆಗೆ ಹೊಂದಿತ್ತು. ಇದೀಗ ಜೂನ್‌ 30ರವರೆಗೆ ಮೂರು ತಿಂಗಳ ಕಾಲ ಮುಂದುವರಿಯಲಿದೆ.

ಬೆಳಗಾವಿ-ಮೈಸೂರು ನಿಲ್ದಾಣಗಳ ನಡುವೆ ನಿತ್ಯ ಸಂಚರಿಸುವ ವಿಶ್ವಮಾನವ ಎಕ್ಸ್‌ಪ್ರೆಸ್, ಬೆಂಗಳೂರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣ-ಹುಬ್ಬಳ್ಳಿ ಸಿದ್ಧಾರೂಢ ಸ್ವಾಮೀಜಿ ನಿಲ್ದಾಣಗಳ ನಡುವೆ ಪ್ರತಿದಿನ ಸಂಚರಿಸುವ ಎಕ್ಸ್‌ಪ್ರೆಸ್‌ ರೈಲುಗಳನ್ನು ರಾಮಗಿರಿ ನಿಲ್ದಾಣದಲ್ಲಿ ಒಂದು ನಿಮಿಷ ತಾತ್ಕಾಲಿಕ ನಿಲುಗಡೆಗೊಳಿಸಲು ಮಾರ್ಚ್ 31ರ ವರೆಗೆ ಹಿಂದೆ ಅವಕಾಶ ನೀಡಲಾಗಿತ್ತು. ಇದೀಗ ಸೆ.30ರವರೆಗೆ 6 ತಿಂಗಳ ಕಾಲ ನಿಲುಗಡೆಯನ್ನು ವಿಸ್ತರಣೆ ಮಾಡಲಾಗಿದೆ.

ಸಂಚಾರ ಮುಂದುವರಿಕೆ: ಬೇಸಿಗೆ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಕಡಿಮೆಗೊಳಿಸಲು ನರಸಾಪುರ-ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ (ಎಸ್ಎಂವಿಟಿ) ಬೆಂಗಳೂರು-ನರಸಾಪುರ ವಿಶೇಷ ಎಕ್ಸ್‌ಪ್ರೆಸ್‌ ರೈಲುಗಳ ಸಂಚಾರವನ್ನು ಏ.6ರವರೆಗೆ ವಿಸ್ತರಿಸಲು ರೈಲ್ವೆ ಮಂಡಳಿ ಮುಂದುವರಿಸಲು ದಕ್ಷಿಣ ಮಧ್ಯ ರೈಲ್ವೆ ನಿರ್ಧರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT