ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ವಿಡಿಯೊ ಬಿಷಪ್‌ ಕಾಟನ್‌ ಶಾಲೆಯದ್ದಲ್ಲ’

Last Updated 9 ಜುಲೈ 2020, 16:53 IST
ಅಕ್ಷರ ಗಾತ್ರ

ಬೆಂಗಳೂರು: ವಿದ್ಯಾರ್ಥಿಯ ಪೋಷಕರೊಬ್ಬರ ಮೇಲೆ ಪ್ರಾಂಶುಪಾಲರು ಹಲ್ಲೆ ಮಾಡಿದ್ದಾರೆ ಎನ್ನಲಾದ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಆದರೆ, ಇದು ನಗರದ ಸೇಂಟ್‌ ಮಾರ್ಕ್ಸ್‌ ರಸ್ತೆಯಲ್ಲಿರುವ ಬಿಷಪ್‌ ಕಾಟನ್‌ ಬಾಲಕಿಯರ ಶಾಲೆಗೆ ಸಂಬಂಧಿಸಿದ್ದಲ್ಲ ಎಂದು ಸಂಸ್ಥೆಯ ಪ್ರಾಚಾರ್ಯರಾದ ಡಾ. ಲಾವಣ್ಯ ಮಿತ್ರನ್‌ ಸ್ಪಷ್ಟಪಡಿಸಿದ್ದಾರೆ.

‘ವಿಡಿಯೊ ಜೊತೆಗೆ, ಬಿಷಪ್‌ ಕಾಟನ್‌ ಬಾಲಕಿಯರ ಶಾಲೆಯ ಪ್ರಾಚಾರ್ಯರಿಂದ ಪೋಷಕರೊಬ್ಬರ ಮೇಲೆ ಹಲ್ಲೆ ಎಂಬ ಸಾಲುಗಳನ್ನು ಬರೆದು, ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೊದಲ್ಲಿರುವ ವ್ಯಕ್ತಿಗೂ ನಮ್ಮ ಸಂಸ್ಥೆಗೂ ಯಾವುದೇ ಸಂಬಂಧವಿಲ್ಲ’ ಎಂದು ಅವರು ತಿಳಿಸಿದ್ದಾರೆ.

‘ಎಲ್ಲೋ ನಡೆದ ಘಟನೆಯ ಜೊತೆ 155 ವರ್ಷಗಳಷ್ಟು ಪರಂಪರೆ ಹೊಂದಿರುವ ನಮ್ಮ ಸಂಸ್ಥೆಯ ಹೆಸರು ಸೇರಿಸಿ ಈ ರೀತಿ ಸುಳ್ಳು ಮಾಹಿತಿ ಹಂಚುತ್ತಿರುವ ಬಗ್ಗೆ ನಮ್ಮ ಸಂಸ್ಥೆಯ ಹಿತೈಷಿಗಳು ಕರೆ ಮಾಡಿ ನಮ್ಮ ಗಮನಕ್ಕೆ ತಂದಿದ್ದಾರೆ. ಈ ರೀತಿ ಸುಳ್ಳು ಮಾಹಿತಿ ಹಬ್ಬಿಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿರುವುದಾಗಿಯೂ ತಿಳಿಸಿದ್ದಾರೆ’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT