ಬುಧವಾರ, ಆಗಸ್ಟ್ 10, 2022
23 °C

ವಾಸವಿ ಪೀಠ: ಜೂ.20ಕ್ಕೆ ಪೀಠಾರೋಹಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು:ವಾಸವಿ ಪೀಠದ ದ್ವಿತೀಯ ಪೀಠಾಧಿಪತಿಯಾಗಿ ಸಚ್ಚಿದಾನಂದ ಸರಸ್ವತಿ  ಅವರ ಪೀಠಾರೋಹಣ ಕಾರ್ಯಕ್ರಮ ಇದೇ 20ರಂದು ಮಲ್ಲೇಶ್ವರದ ಕನ್ಯಕಾಪರಮೇಶ್ವರಿ ದೇವಾಲಯದಲ್ಲಿ ಸರಳವಾಗಿ ನೆರವೇರಲಿದೆ.

‘ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ಕಾರ್ಯಕ್ರಮ ಆಯೋಜಿಸಲು ಉದ್ದೇಶಿಸಲಾಗಿತ್ತು. ಕೋವಿಡ್‌ ಕಾರಣದಿಂದ ಧಾರ್ಮಿಕ ಕಾರ್ಯಕ್ರಮಗಳನ್ನು ಮಾತ್ರ ನಡೆಸಲು ನಿರ್ಧರಿಸಲಾಗಿದೆ. ಆನ್‌ಲೈನ್‌ನಲ್ಲೂ ಕಾರ್ಯಕ್ರಮದ ನೇರಪ್ರಸಾರ ಇರಲಿದೆ’ ಎಂದು ವಾಸವಿ ಪೀಠಾರೋಹಣ ಸಮಿತಿ ಅಧ್ಯಕ್ಷ ಮಾನಂದಿ ಸುರೇಶ್ ತಿಳಿಸಿದರು.

‘ಪೀಠಾರೋಹಣ ಸಂದರ್ಭದಲ್ಲಿ ರಾಜ್ಯದಲ್ಲಿರುವ ವಾಸವಿ ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆಯಲಿದೆ. ವೃದ್ಧಾಶ್ರಮ, ಅನಾಥಾಶ್ರಮ ಹಾಗೂ ಆಸ್ಪತ್ರೆಗಳಲ್ಲಿ ಅನ್ನದಾನ ಇರಲಿದೆ. ಜೂನ್‌ 17ರಿಂದ ಪೀಠಾರೋಹಣದ ಕಾರ್ಯಕ್ರಮಗಳು ಆರಂಭಗೊಳ್ಳಲಿದ್ದು, ಫೇಸ್‌ಬುಕ್ ಹಾಗೂ ಯುಟ್ಯೂಬ್‌ನಲ್ಲಿ ನೇರಪ್ರಸಾರದ ವ್ಯವಸ್ಥೆ ಮಾಡಲಾಗುವುದು.ಕಾರ್ಯಕ್ರಮಕ್ಕೆ ಶುಭಕೋರುವ ವಿಡಿಯೊಗಳನ್ನು ಇಮೇಲ್‌–kavmss@gmail.com ಅಥವಾ 9663900439 ಸಂಖ್ಯೆಗೆ ವಾಟ್ಸ್‌ಆ್ಯಪ್ ಮಾಡಬಹುದು’ ಎಂದರು. 

1989ರಲ್ಲಿ ಜನಿಸಿದ ಸಚ್ಚಿದಾನಂದ ಸರಸ್ವತಿ ಅವರು ಶಿವಮೊಗ್ಗದ ಉಮಾ ಹಾಗೂ ಭೂಪಾಳಂ ನಾಗರಾಜ್ ದಂಪತಿಯ ಪುತ್ರ. ಶಿವಮೊಗ್ಗದ ವಾಸವಿ ವಿದ್ಯಾಲಯದಲ್ಲಿ ಪ್ರಾಥಮಿಕ ಶಿಕ್ಷಣ ಹಾಗೂ ಕ್ರೈಸ್ಟ್‌ ವಿಶ್ವವಿದ್ಯಾಲಯದಿಂದ ನಿರ್ವಹಣೆ ವಿಷಯದಲ್ಲಿ ಚಿನ್ನದ ಪದಕದೊಂದಿಗೆ ಪದವಿ ಪೂರೈಸಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.