ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಟ್ ಕಾಯಿನ್ ಅಕ್ರಮ: ಸಿಸಿಬಿ ಇನ್‌ಸ್ಪೆಕ್ಟರ್ ಪ್ರಶಾಂತ್ ಬಾಬು, ಸೈಬರ್ ತಜ್ಞ ಬಂಧನ

Published 25 ಜನವರಿ 2024, 5:46 IST
Last Updated 25 ಜನವರಿ 2024, 5:46 IST
ಅಕ್ಷರ ಗಾತ್ರ

ಬೆಂಗಳೂರು: ಬಿಟ್‌ ಕಾಯಿನ್ ಅಕ್ರಮ ಪ್ರಕರಣದಲ್ಲಿ ಸಿಸಿಬಿ ಇನ್‌ಸ್ಪೆಕ್ಟರ್ ಪ್ರಶಾಂತ್ ಬಾಬು ಹಾಗೂ ಸೈಬರ್ ತಜ್ಞ ಸಂತೋಷ್ ಅವರನ್ನು ವಿಶೇಷ ತನಿಖಾ ತಂಡದ (ಎಸ್ಐಟಿ) ಅಧಿಕಾರಿಗಳು ಬುಧವಾರ ರಾತ್ರಿ ಬಂಧಿಸಿದ್ದಾರೆ.

ಇಂದು(ಗುರುವಾರ) ಮಧ್ಯಾಹ್ನ ನ್ಯಾಯಾಲಯಕ್ಕೆ‌ ಹಾಜರುಪಡಿಸಲಿದ್ದಾರೆ‌.

'ಎಸ್ಐಟಿ ಅಧಿಕಾರಿಗಳು ಬುಧವಾರ ಪ್ರಶಾಂತ್ ಬಾಬು ಹಾಗೂ ಸಂತೋಷ್ ಅವರನ್ನು ವಿಚಾರಣೆಗೆ ಕರೆಸಿದ್ದರು. ರಾತ್ರಿಯವರೆಗೂ ವಿಚಾರಣೆ ನಡೆಸಿದ ಅಧಿಕಾರಿಗಳು ಬಳಿಕ ಅವರನ್ನು ಬಂಧಿಸಿದ್ದಾರೆ. ಸದ್ಯದಲ್ಲೇ ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ಕಸ್ಪಡಿಗೆ ಪಡೆಯುವ ಸಾಧ್ಯತೆ ಇದೆ' ಎಂದು ಎಸ್ಐಟಿ ಮೂಲಗಳು ತಿಳಿಸಿವೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಬಿಟ್ ಕಾಯಿನ್ ಪ್ರಕರಣದ ಸಾಕ್ಷಿ ನಾಶಪಡಿಸಿದ್ದ ಆರೋಪದಡಿ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಸಿಸಿಬಿ‌ ಪೊಲೀಸರು ಹಾಗೂ ಇತರರ ವಿರುದ್ಧ ಎಫ್ಐಆರ್ ದಾಖಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT