‘ಬಿಜೆಪಿ ಮತ್ತೆ ಅಧಿಕಾರಕ್ಕೆ’: ಡಿ.ವಿ.ಸದಾನಂದಗೌಡ ವಿಶ್ವಾಸ

ಬೆಂಗಳೂರು: ‘ಮುಂದಿನ ಚುನಾವಣೆಯಲ್ಲಿ ಬಿಜೆಪಿ ಜಯಸಾಧಿಸಿ ಅಧಿಕಾರ ಹಿಡಿಯಲಿದೆ. ದಾಸರಹಳ್ಳಿಯಲ್ಲಿ ಮತ್ತೆ ಬಿಜೆಪಿ ಬರುವುದು ಖಚಿತ’ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹೇಳಿದರು.
ಪೀಣ್ಯದಾಸರಹಳ್ಳಿ ಸಮೀಪ ಬಾಗಲಗುಂಟೆಯಲ್ಲಿ ನಡೆದ ಲೋಕಸಭಾ ಚುನಾವಣೆ ಪೂರ್ವಭಾವಿಸಭೆಯಲ್ಲಿ ಮಾತನಾಡಿದರು.
‘ನನ್ನ ಅನುದಾನದಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನಿರ್ಮಿಸಲು ಹಿಂಬಾಲಕರ ಮೂಲಕ ರಾಜಕೀಯ ಮಾಡುತ್ತಾರೆ. ಗುತ್ತಿಗೆದಾರರು, ಅಧಿಕಾರಿಗಳನ್ನು ಮನೆ ಬಾಗಿಲಿಗೆ ಕರೆಸಿಕೊಂಡು ಶುದ್ಧ ಕುಡಿಯುವ ನೀರಿನ ಘಟಕ ತಮ್ಮ ಪಕ್ಷ ಕೊಟ್ಟಿದ್ದು ಎಂದು ನೀರು ಬಿಡುವವರೆಗೆ ಹೇಳಿಕೊಂಡು ಕೀಳು ಮಟ್ಟದ ರಾಜಕಾರಣ ಮಾಡುತ್ತಿದ್ದಾರೆ’ ಎಂದು ಪರೋಕ್ಷವಾಗಿ ಸ್ಥಳೀಯ ಶಾಸಕರ ಮೇಲೆ ಆರೋಪ ಮಾಡಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.