ಬುಧವಾರ, ಆಗಸ್ಟ್ 12, 2020
27 °C

ಬಿಜೆಪಿ ಅಭಿಯಾನ ಸಮಾರೋಪ ಜುಲೈ 6ಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೇಂದ್ರ ಸರ್ಕಾರದ ಒಂದು ವರ್ಷದ ಸಾಧನೆ ಹಾಗೂ ಕೋವಿಡ್ ಬಗ್ಗೆ ಬಿಜೆಪಿ ಹಮ್ಮಿಕೊಂಡಿದ್ದ ಜನಸಂಪರ್ಕ ಅಭಿಯಾನ ರಾಜ್ಯದಲ್ಲಿ ಕೊನೆಯ ಹಂತಕ್ಕೆ ಬಂದಿದ್ದು, ಇದೇ 6 ರಂದು ಸಮಾರೋಪ ನಡೆಯಲಿದೆ.

‘6ರಂದು ಸಂಜೆ 5 ಗಂಟೆಗೆ ವರ್ಚ್ಯುವಲ್‌ ರೂಪದಲ್ಲಿ ಸಮಾರೋಪ ನಡೆಯಲಿದ್ದು, 50 ಲಕ್ಷ ಜನರು ಭಾಗವಹಿಸುವ ಗುರಿಯನ್ನು ಇಟ್ಟುಕೊಳ್ಳಲಾಗಿದೆ. ಈ ಮೊದಲು ಜು.4 ಕ್ಕೆ ನಿಗದಿ ಮಾಡಲಾಗಿತ್ತು. ಪಕ್ಷದ  ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್‍, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಿ.ಮುರಳೀಧರ ರಾವ್‌ ಪಾಲ್ಗೊಳ್ಳುವರು’ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಜೂನ್‌ 7ರಿಂದ 30ರವರೆಗೆ ವರೆಗೆ ನಡೆದ ಅಭಿಯಾನದಲ್ಲಿ ಒಟ್ಟು 427 ರ‍್ಯಾಲಿ ನಡೆಸಲಾಗಿದ್ದು, 10.51 ಲಕ್ಷ ಮಂದಿ ‍ಪಾಲ್ಗೊಂಡಿದ್ದಾರೆ’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು