ಮಂಗಳವಾರ, ಜನವರಿ 21, 2020
25 °C
ಉಪಚುನಾವಣೆ ಫಲಿತಾಂಶ

ತೆನೆ ಹೊತ್ತ ಮಹಿಳೆಗೆ ಕೈಕೊಟ್ಟರೂ.. ಗೋಪಾಲಯ್ಯನ ಕೈಬಿಡದ ಮಹಾಲಕ್ಷ್ಮೀ ಲೇಔಟ್ ಮಂದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಹಾಲಕ್ಷ್ಮೀ ಲೇಔಟ್ ವಿಧಾನಸಭೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೋಪಾಲಯ್ಯ ಹ್ಯಾಟ್ರಿಕ್‌ ಗೆಲುವು ಸಾಧಿಸಿದ್ದಾರೆ.

2013 ಹಾಗೂ 2018ರ ವಿಧಾನಸಭೆ ಚುನಾವಣೆಗಳಲ್ಲಿ ಜೆಡಿಎಸ್‌ ಪಕ್ಷದಿಂದ ಸ್ಪರ್ಧಿಸಿ ಗೆಲುವು ಕಂಡಿದ್ದ ಗೋಪಾಲಯ್ಯ ಈ ಬಾರಿ ಜೆಡಿಎಸ್‌ಗೆ ಕೈಕೊಟ್ಟು ಬಿಜೆಪಿಗೆ ಸೇರಿದ್ದರು. 2013ರಲ್ಲಿ ಕಾಂಗ್ರೆಸ್‌ ಹಾಗೂ 2013ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಎನ್‌.ಎಲ್‌.ನರೇಂದ್ರಬಾಬು ವಿರುದ್ಧ ಕ್ರಮವಾಗಿ 15370 ಮತ್ತು 41,100 ಮತಗಳಿಂದ ಗೆದ್ದಿದರು.

ಇದನ್ನೂ ಓದಿ: ಮಹಾಲಕ್ಷ್ಮಿ ಲೇಔಟ್‌ ಅಖಾಡದಲ್ಲೊಂದು ಸುತ್ತು| ಯಾರಿಗೆ ಒಲಿಯುವಳು ‘ಲಕ್ಷ್ಮೀ’?

ಇದೀಗ ಆ ಅಂತರ 54,386ಕ್ಕೆ ಏರಿದೆ. ಆ ಮೂಲಕ ಉಪಚುನಾವಣೆ ನಡೆದ 15 ಕ್ಷೇತ್ರಗಳ ಪೈಕಿ ಹೆಚ್ಚು ಮತಗಳ ಅಂತರದಿಂದ ಗೆದ್ದ ಎರಡನೇ ಅಭ್ಯರ್ಥಿ ಎನಿಸಿಕೊಂಡಿದ್ದಾರೆ. ಬಿಬಿಎಂಪಿಯ ಪೂರ್ವದ ಹೆಬ್ಬಾಗಿಲಿನಂತಿರುವ ಕೆ.ಆರ್‌.ಪುರ ಕ್ಷೇತ್ರದಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿರುವ ಬಿಜೆಪಿ ಅಭ್ಯರ್ಥಿ ಬಿ.ಎ.ಬಸವರಾಜು (ಬೈರತಿ ಬಸವರಾಜು), ಕಾಂಗ್ರೆಸ್‌ ಅಭ್ಯರ್ಥಿ ಎಂ.ನಾರಾಯಣ ಸ್ವಾಮಿ ವಿರುದ್ಧ 62,646 ಮತಗಳ ಅಂತರದಿಂದ ಜಯ ಗಳಿಸಿದ್ದಾರೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು