ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೈರುತ್ಯ ಪದವೀಧರ ಕ್ಷೇತ್ರ: ಬಂಡಾಯ

Published 13 ಮೇ 2024, 18:25 IST
Last Updated 13 ಮೇ 2024, 18:25 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನ ಪರಿಷತ್‌ನ ಆರು ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ ಬಿರುಸು ಪಡೆದಿರುವ ಮಧ್ಯೆಯೇ ನೈರುತ್ಯ ಪದವೀಧರರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ಎರಡೂ ಪಕ್ಷಗಳು ಬಂಡಾಯದ ಬಿಸಿ ಎದುರಿಸುತ್ತಿವೆ.

ಲೋಕಸಭಾ ಚುನಾವಣೆಯಲ್ಲಿ ಕೆಲವು ಕ್ಷೇತ್ರಗಳಲ್ಲಿ ಎರಡೂ ಪಕ್ಷಗಳು ಬಂಡಾಯದ ಬಿಸಿ ಎದುರಿಸಿದ್ದವು. ತಕ್ಷಣದಲ್ಲೇ ಎದುರಾದ ವಿಧಾನ ಪರಿಷತ್‌ ಚುನಾವಣೆಯಲ್ಲೂ ಬಂಡಾಯ ಮುಂದುವರಿದಿದೆ. ನೈರುತ್ಯ ‍ಪದವೀಧರ ಕ್ಷೇತ್ರಗಳಲ್ಲಿ ಎರಡೂ ಪಕ್ಷಗಳೂ ಬಂಡಾಯ ಎದ್ದವರನ್ನು ಮನವೊಲಿಸಲು ಕಸರತ್ತು ನಡೆಸುತ್ತಿವೆ.

ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಆಯನೂರು ಮಂಜುನಾಥ್‌ ಅವರಿಗೆ ಕಾಂಗ್ರೆಸ್‌ ಟಿಕೆಟ್‌ ನೀಡಿರುವುದರ ವಿರುದ್ಧ ಬಂಡಾಯ ಸಾರಿರುವ ಎಸ್‌.ಪಿ. ದಿನೇಶ್‌, ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಘೋಷಿಸಿದ್ದಾರೆ. ದಿನೇಶ್ ಹಿಂದಿನ ಎರಡು ಚುನಾವಣೆಗಳಲ್ಲಿ ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.

ಈ ಕ್ಷೇತ್ರದಲ್ಲಿ ಬಿಜೆಪಿ ಡಾ. ಧನಂಜಯ ಸರ್ಜಿ ಅವರಿಗೆ ಟಿಕೆಟ್‌ ಘೋಷಿಸಿದ ಬೆನ್ನಲ್ಲೇ ಉಡುಪಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ. ರಘುಪತಿ ಭಟ್‌ ಬಂಡಾಯ ಸಾರಿದ್ದಾರೆ. ಪಕ್ಷದ ಟಿಕೆಟ್‌ ಆಕಾಂಕ್ಷಿಯಾಗಿದ್ದ ಅವರು, ಪಕ್ಷೇತರ ಅಭ್ಯರ್ಥಿಯಾಗಿ
ಸ್ಪರ್ಧಿಸುವುದಾಗಿ ಪ್ರಕಟಿಸಿದ್ದಾರೆ.

ಸೋಮವಾರ ಉಡುಪಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ರಘುಪತಿ ಭಟ್‌, ‘ವಿಧಾನ ಪರಿಷತ್‌ ಚುನಾವಣೆಗೆ ನನಗೆ ಟಿಕೆಟ್‌ ನೀಡುವುದಾಗಿ ಪಕ್ಷದ ವರಿಷ್ಠರು ಭರವಸೆ ನೀಡಿದ್ದರು. ನಾನು ಚುನಾವಣಾ ತಯಾರಿ ನಡೆಸಿದ್ದೆ. ಈಗ ಸರ್ಜಿ ಅವರಿಗೆ ಟಿಕೆಟ್‌ ಘೋಷಿಸಲಾಗಿದೆ. ನಾನು ಪಕ್ಷೇತರನಾಗಿ ಸ್ಪರ್ಧಿಸುತ್ತೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT