ಸೋಮವಾರ, ಡಿಸೆಂಬರ್ 9, 2019
20 °C
ಬಿಜೆಪಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ ಇಂದು

ರಂಗೇರಲಿದೆ ಉಪಚುನಾವಣಾ ಕಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳು ಸೋಮವಾರ ನಾಮಪತ್ರ ಸಲ್ಲಿಸಲಿದ್ದು, ಚುನಾವಣಾ ಕಣ ಇನ್ನಷ್ಟು ರಂಗೇರಲಿದೆ. 

ಹೊಸಕೋಟೆಯ ಬಿಜೆಪಿ ಅಭ್ಯರ್ಥಿ ಎಂ.ಟಿ.ಬಿ. ನಾಗರಾಜ್‌ ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ಸಾಗಿ ಹೊಸಕೋಟೆ ತಾಲ್ಲೂಕು ಕಚೇರಿಯಲ್ಲಿ ಮಧ್ಯಾಹ್ನ 1ಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ. 

ಕೆ.ಆರ್. ಪುರ ಕ್ಷೇತ್ರದಲ್ಲಿ ಭೈರತಿ ಬಸವರಾಜ್‌ ಬಿಜೆಪಿ ಉಮೇದುವಾರರಾಗಿದ್ದಾರೆ. ಭಟ್ಟರಹಳ್ಳಿಯ ಆಂಜನೇಯ ದೇಗುಲದಿಂದ ಮೆರವಣಿಗೆಯಲ್ಲಿ ಹೊರಡಲಿರುವ ಅವರು, ಬಿಬಿಎಂಪಿ ಕಚೇರಿಯಲ್ಲಿ ಬೆಳಿಗ್ಗೆ 11ಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ. 

ಶಿವಾಜಿನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎ.ಶರವಣ ಕ್ವೀನ್ಸ್‌ ರಸ್ತೆಯಲ್ಲಿನ ಬಿಬಿಎಂಪಿ ಕಚೇರಿಯಲ್ಲಿ ಮಧ್ಯಾಹ್ನ 12ಕ್ಕೆ ತಮ್ಮ ಉಮೇದುವಾರಿಕೆ ಸಲ್ಲಿಸಲಿದ್ದಾರೆ. ಇದಕ್ಕೂ ಮುನ್ನ ಅವರು ನಾಗಮ್ಮ ದೇಗುಲದಲ್ಲಿ ನಡೆಯಲಿರುವ ಪೂಜೆಯಲ್ಲಿ ಪಾಲ್ಗೊಳ್ಳಲಿದ್ದಾರೆ. 

ಯಶವಂತಪುರ ಕ್ಷೇತ್ರದಲ್ಲಿ ಎಸ್.ಟಿ. ಸೋಮಶೇಖರ್‌, ಮಹಾಲಕ್ಷ್ಮಿ ಲೇಔಟ್‌ ಕ್ಷೇತ್ರದಲ್ಲಿ ಕೆ. ಗೋಪಾಲಯ್ಯ ಮಧ್ಯಾಹ್ನ 12ಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ. ಇದಕ್ಕೂ ಮುನ್ನ ಬೆಂಬಲಿಗರೊಂದಿಗೆ ಅವರು ಮೆರವಣಿಗೆ ನಡೆಸಲಿದ್ದಾರೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು