ಭಾನುವಾರ, ಏಪ್ರಿಲ್ 2, 2023
33 °C

ಬಿಜೆಪಿ ಚುನಾವಣಾ ಪ್ರಚಾರ: ವಿವಿಧ ಸಮಿತಿಗಳ ರಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಿಧಾನಸಭೆ ಚುನಾವಣೆ ಉದ್ದೇಶಿತ ನಾಲ್ಕು ಯಾತ್ರೆಗಳು, ಪ್ರಣಾಳಿಕೆ ತಯಾರಿಕೆ ಸಲಹಾ ಅಭಿಯಾನ, ವಿವಿಧ ಮೋರ್ಚಾಗಳ ಜಿಲ್ಲಾ ಸಮಾವೇಶ, ಫಲಾನುಭವಿಗಳ ಸಮ್ಮೇಳನ, ವಿಡಿಯೊ–ವ್ಯಾನ್‌ ಪ್ರಚಾರಕ್ಕಾಗಿ ಬಿಜೆಪಿ
ಪ್ರತ್ಯೇಕ ಸಮಿತಿಗಳನ್ನು ರಚಿಸಲಾಗಿದ್ದು, ಬಿ.ವೈ.ವಿಜಯೇಂದ್ರ, ಡಾ.ಕೆ.ಸುಧಾಕರ್‌ ಇದರಲ್ಲಿ ಸ್ಥಾನ ಪಡೆದಿದ್ದಾರೆ.

ಸಚಿವರು, ಶಾಸಕರು, ವಿಧಾನಪರಿಷತ್‌ ಸದಸ್ಯರು, ರಾಜ್ಯ ಪದಾಧಿಕಾರಿಗಳು, ಪ್ರಮುಖರು, ಸಹಪ್ರಮುಖರನ್ನು ಸಂಚಾಲಕರನ್ನಾಗಿ ನೇಮಿಸಲಾಗಿದೆ ಎಂದು ಪಕ್ಷದ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್‌ ಸುರಾನ ತಿಳಿಸಿದ್ದಾರೆ.

ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ ಅವರನ್ನು ಯಾತ್ರೆಯ ಪ್ರಮುಖರನ್ನಾಗಿ, ರಾಜ್ಯ ಪ್ರಧಾನಕಾರ್ಯದರ್ಶಿ ಎನ್‌. ರವಿಕುಮಾರ್‌
ಮತ್ತು ಮಹಿಳಾ ಮೋರ್ಚಾ ಅಧ್ಯಕ್ಷೆ ಗೀತಾ ವಿವೇಕಾನಂದ ಅವರನ್ನು ಸಹ ಪ್ರಮುಖರನ್ನಾಗಿ ನೇಮಿಸಲಾಗಿದೆ.

ವಿವಿಧ ಮೋರ್ಚಾಗಳ ಜಿಲ್ಲಾ ಸಮಾವೇಶಗಳಿಗೆ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಸಂಚಾಲಕರನ್ನಾಗಿ ನೇಮಿಸಲಾಗಿದೆ. ಜಗದೀಶ ಹಿರೇಮನಿ ಮತ್ತು ಯಶಪಾಲ್‌ ಸುವರ್ಣ ಅವರನ್ನು ಸಹ–ಸಂಚಾಲಕರನ್ನಾಗಿ ನೇಮಿಸಲಾಗಿದೆ.

ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಕಾರ್ಯ ಕ್ರಮಗಳ ಫಲಾನುಭವಿಗಳ ಸಮ್ಮೇಳನಕ್ಕೆ ಸಂಚಾಲಕರನ್ನಾಗಿ ಹಾಲಪ್ಪ ಬಸಪ್ಪ ಆಚಾರ್ ಅವರನ್ನು, ಸಚಿವ ಎಸ್‌.ಟಿ. ಸೋಮಶೇಖರ್ ಮತ್ತು ಶಾಸಕ ಪಿ.ರಾಜೀವ್‌ ಅವರನ್ನು ಸಹ– ಸಂಚಾಲಕರನ್ನಾಗಿ ನೇಮಿಸಲಾಗಿದೆ.

ಪ್ರಣಾಳಿಕೆ ತಯಾರಿ ಸಲಹಾ ಅಭಿಯಾನಕ್ಕೆ ಸಚಿವ ಡಾ.ಕೆ.ಸುಧಾಕರ್‌ ಸಂಚಾಲಕರಾಗಿದ್ದು, ಸಚಿವ ಬಿ.ಸಿ.ನಾಗೇಶ್‌, ಬಿಜೆಪಿ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್‌, ಸಂಸದ ತೇಜಸ್ವಿ ಸೂರ್ಯ, ಶಾಸಕರಾದ ಎಸ್‌.ಸುರೇಶ್‌ ಕುಮಾರ್, ಅಭಯ ಪಾಟೀಲ, ರಾಜಕುಮಾರ್‌ ಪಾಟೀಲ ತೇಲ್ಕೂರು, ಎನ್‌.ಮಹೇಶ್‌, ಪಿ.ರಾಜೀವ್‌ ಅವರನ್ನು ಸಹ ಸಂಚಾಲಕರನ್ನಾಗಿ ನೇಮಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು