ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ರಾಜ್ಯದ ಸಚಿವರು ಮತ್ತು ಕಾಂಗ್ರೆಸ್ ಶಾಸಕರು ಸರ್ಕಾರಿ ಕಚೇರಿಗಳನ್ನು ರಾಜಕೀಯ ಚಟುವಟಿಕೆಗಳಿಗೆ ಬಳಸಿಕೊಳ್ಳುತ್ತಿದ್ದಾರೆ ಎಂದು ಬಿಜೆಪಿಯು ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಶಾಸಕ ಎಸ್.ಸುರೇಶ್ ಕುಮಾರ್ ನೇತೃತ್ವದ ಬಿಜೆಪಿ ನಿಯೋಗ ರಾಜ್ಯದ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರನ್ನು ಭಾನುವಾರ ಭೇಟಿಮಾಡಿ ದೂರು ಸಲ್ಲಿಸಿತು. ಸರ್ಕಾರಿ ಕಚೇರಿಗಳನ್ನು ರಾಜಕೀಯ ಚಟುವಟಿಕೆಗಳಿಗೆ ಬಳಸಿಕೊಳ್ಳುತ್ತಿರುವವರು ಮತ್ತು ಅದನ್ನು ತಡೆಯಲು ವಿಫಲವಾಗಿರುವ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಜೆಪಿ ಒತ್ತಾಯಿಸಿದೆ.

‘ನಜ್ಮಾ ನಝೀರ್ ಎಂಬುವವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳಲು ಶಿವಕುಮಾರ್ ಅವರು ಸರ್ಕಾರಿ ಕಚೇರಿ ಬಳಸಿಕೊಂಡಿದ್ದಾರೆ. ಸಚಿವ ಕೃಷ್ಣ ಬೈರೇಗೌಡ ಅವರು ಮಾರ್ಚ್ 25ರಂದು ವಿಕಾಸಸೌಧದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡಿದ್ದಾರೆ. ಇವೆಲ್ಲವೂ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ವ್ಯಾಪ್ತಿಗೆ ಬರುತ್ತವೆ’ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ವಿಧಾನಸೌಧದಲ್ಲಿನ ಸಚಿವರ ಕಚೇರಿಗಳನ್ನು ಆಯೋಗವು ಕೂಡಲೇ ಮುಚ್ಚಿಸಬೇಕು. ಸರ್ಕಾರಿ ಕಚೇರಿಗಳನ್ನು ರಾಜಕೀಯ ಚಟುವಟಿಕೆಗಳಿಗೆ ಬಳಸದಂತೆ ಸಚಿವರು ಮತ್ತು ಶಾಸಕರಿಗೆ ನಿರ್ಬಂಧ ಹೇರಬೇಕು ಎಂದು ಬಿಜೆಪಿ ಆಗ್ರಹಿಸಿದೆ.

ಬೆಂಗಳೂರು ದಕ್ಷಿಣ ಜಿಲ್ಲಾ ಘಟಕದ ಅಧ್ಯಕ್ಷ ಮತ್ತು ಶಾಸಕ ಸಿ.ಕೆ. ರಾಮಮೂರ್ತಿ, ಪಕ್ಷದ ಮುಖ್ಯ ವಕ್ತಾರ ಅಶ್ವತ್ಥನಾರಾಯಣ, ವಕ್ತಾರರಾದ ಪ್ರಕಾಶ್ ಶೇಷರಾಘವಾಚಾರ್, ಎಚ್.ಎನ್.ಚಂದ್ರಶೇಖರ್, ಬೆಂಗಳೂರು ದಕ್ಷಿಣ ಜಿಲ್ಲಾ ಘಟಕದ ವಕ್ತಾರ ಟಿ.ಎಸ್. ಸಂಕೀರ್ತ್ ನಿಯೋಗದಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.