ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಸರ್ಕಾರದಲ್ಲಿ ವ್ಯಾಪಕ ಭ್ರಷ್ಟಾಚಾರ: ರಣದೀಪ್ ಸುರ್ಜೆವಾಲಾ

Last Updated 15 ಏಪ್ರಿಲ್ 2022, 20:25 IST
ಅಕ್ಷರ ಗಾತ್ರ

ಕೆ.ಆರ್.ಪುರ: ‘ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಕೇಂದ್ರ ಮತ್ತು ರಾಜ್ಯ ಬಿಜೆಪಿ ನಾಯಕರು ಶೇ 40ರಷ್ಟು ಕಮಿಷನ್ ಪಡೆಯುತ್ತಿದ್ದಾರೆ’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಆರೋಪಿಸಿದರು.

ಕೆ.ಆರ್.ಪುರ ಸಮೀಪದ ವೈಟ್‌ಫೀಲ್ಡ್‌ ಇನ್ನರ್ ಸರ್ಕಲ್ ಬಳಿ ಮಹದೇವಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಸಚಿವ ಈಶ್ವರಪ್ಪ ಶೇ 40ರಷ್ಟು ಕಮಿಷನ್ ಪಡೆದ ಪರಿಣಾಮ ಗುತ್ತಿಗೆದಾರರೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಭ್ರಷ್ಟಾಚಾರದ ಬಗ್ಗೆ ಪ್ರಧಾನಿಗೆ ಗುತ್ತಿಗೆದಾರರು ಈ ಹಿಂದೆ ಬಹಿರಂಗವಾಗಿ ಪತ್ರ ಬರೆದಿದ್ದರೂ ಯಾವುದೇ ಕ್ರಮ ಕೈಗೊಳ್ಳಲಿಲ್ಲ’ ಎಂದು ದೂರಿದರು.

’ಸಾರ್ವಜನಿಕ ಕ್ಷೇತ್ರದಲ್ಲಿ ಮೀಸಲಾತಿಯನ್ನು ತೆಗೆದುಹಾಕಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಾರ್ವಜನಿಕ ಸ್ವತ್ತುಗಳನ್ನು ಖಾಸಗೀಕರಣ ಮಾಡಲು ಹೊರಟಿವೆ. ಖಾಸಗೀಕರಣದ ಮೂಲಕ ಮೀಸಲಾತಿಯನ್ನು ಹಂತ ಹಂತವಾಗಿ ತೆಗೆದು ಹಾಕುವ ಪ್ರಯತ್ನ ಮಾಡಲಾಗುತ್ತಿದೆ. ಇದರಿಂದ ಪರಿಶಿಷ್ಟರಿಗೆ ಅನ್ಯಾಯವಾಗಲಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT