ಬೆಂಗಳೂರು: ‘ಕೇಂದ್ರದಲ್ಲಿ ಹತ್ತು ವರ್ಷ ಅಧಿಕಾರ ನಡೆಸಿದ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರದ ಸಾಧನೆ ಕೇವಲ ಚೊಂಬು’ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಲೇವಡಿ ಮಾಡಿದರು.

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ ಪರ ಚಾಮರಾಜಪೇಟೆ ಕ್ಷೇತ್ರದಲ್ಲಿ ರೋಡ್ ನಡೆಸಿ, ನಂತರ ಸಂಗಮ್ ವೃತ್ತದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ‘ಹತ್ತು ವರ್ಷ ಅಧಿಕಾರ ನಡೆಸಿದ ಬಿಜೆಪಿ ಐವತ್ತು ವರ್ಷ ದೇಶವನ್ನು ಹಿಂದಕ್ಕೆ ತೆಗೆದುಕೊಂಡು ಹೋಗಿದೆ. ಬಿಜೆಪಿ ಅಭಿವೃದ್ಧಿ ವಿಚಾರದಲ್ಲಿ ಮತ ಕೇಳುವುದಿಲ್ಲ. ಹಿಂದೂ–ಮುಸ್ಲಿಂ ಎಂದು ಜನರನ್ನು ವಿಭಜನೆ ಮಾಡಿ ಕೋಮುಭಾವನೆ ಪ್ರಚೋದಿಸಿ ಸುಳ್ಳು ಹೇಳಿ ಜನರನ್ನು ವಂಚಿಸುತ್ತಿದೆ’ ಎಂದು ದೂರಿದರು.

‘ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಕೊಟ್ಟ ಮಾತಿನಂತೆ ಐದು ಗ್ಯಾರಂಟಿ ಅನುಷ್ಠಾನ ಮಾಡಿದೆ. ಆರನೇ ಗ್ಯಾರಂಟಿ ಆಗಿ ಬಡ ಕುಟುಂಬಗಳಿಗೆ 1.82 ಲಕ್ಷ ಮನೆಗಳನ್ನು ಹಂಚಿಕೆ ಮಾಡಲು ತೀರ್ಮಾನಿಸಿದೆ. ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ವಾರ್ಷಿಕ ₹1 ಲಕ್ಷ, ಯುವ ನಿರುದ್ಯೋಗಿ ಪದವಿಧರರಿಗೆ ₹1 ಲಕ್ಷ, ರೈತರ ಸಾಲ ಮನ್ನಾ ಭರವಸೆ ನೀಡಿದೆ. ಮತದಾರರು ಆಶೀರ್ವದಿಸಿದರೆ ಇವೆಲ್ಲವುಗಳನ್ನು ಈಡೇರಿಸಲಾಗುವುದು’ ಎಂದು ಭರವಸೆ ನೀಡಿದರು.

ಅಭ್ಯರ್ಥಿ ಮನ್ಸೂರ್ ಅಲಿ ಖಾನ್, ‘ದೇಶದ ಜನರು ಬದಲಾವಣೆ ಬಯಸಿದ್ದಾರೆ. ಅದರಂತೆ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ಮಾದರಿಯಾಗಿ ಅಭಿವೃದ್ಧಿ ಮಾಡುವ ಸಂಕಲ್ಪ ತೊಟ್ಟಿದ್ದೇನೆ. ಆದ್ದರಿಂದ, ಈ ಬಾರಿ ಒಂದು ಅವಕಾಶ ಕೊಡಬೇಕು’ ಎಂದು ಮತದಾರರಲ್ಲಿ ಮನವಿ ಮಾಡಿದರು.

ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಟಿ.ಆರ್. ಮಿಲ್ ವೃತ್ತ, ಪಾದರಾಯನಪುರ ಮತ್ತು ಮೋಮಿನ್ಪುರ ರೋಡ್ ಶೋ ನಡೆಸಿ ಮತಯಾಚಿಸಲಾಯಿತು.

ಶಾಂತಿನಗರ ವಿಧಾನಸಭಾ ಕ್ಷೇತ್ರದ ವಿವೇಕನಗರ, ಆಸ್ಟಿನ್ ಟೌನ್, ನೀಲಸಂದ್ರದಲ್ಲಿ ನಡೆದ ರೋಡ್ ಶೋನಲ್ಲಿ ಶಾಸಕ ಎನ್.ಎ. ಹ್ಯಾರಿಸ್ ಅವರು ನೇತೃತ್ವದಲ್ಲಿ ಮನ್ಸೂರ್ ಅಲಿ ಖಾನ್ ಮತಬೇಟೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.