ಬಿಜೆಪಿ ಮುಖಂಡ ಆತ್ಮಹತ್ಯೆ: ಗೆಳತಿಗೆ ಜಾಮೀನು
ಬೆಂಗಳೂರು: ಹೆರೋಹಳ್ಳಿ ವಾರ್ಡ್ನ ಬಿಜೆಪಿ ಮುಖಂಡ ಬಿ.ಪಿ.ಅನಂತರಾಜು (46) ಆತ್ಮಹತ್ಯೆ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿದ್ದ ರೇಖಾ (38) ಎಂಬುವರಿಗೆ ಸೆಷನ್ಸ್ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಕೆ.ಆರ್.ಪುರ ನಿವಾಸಿಯಾದ ರೇಖಾ ತನ್ನ ಪತಿಯನ್ನು ಹನಿಟ್ರ್ಯಾಪ್ ಜಾಲಕ್ಕೆ ಸಿಲುಕಿಸಿದ್ದರು. ಹೀಗಾಗಿಯೇ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಆರೋಪಿಸಿ ಅನಂತರಾಜು ಪತ್ನಿ ದೂರು ನೀಡಿದ್ದರು. ರೇಖಾ ಅವರ ಪತಿ ವಿನೋದ್, ಗೆಳತಿ ಸ್ಪಂದನಾಗೆ ನಿರೀಕ್ಷಣಾ ಜಾಮೀನು ಲಭಿಸಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.