ಶನಿವಾರ, ಫೆಬ್ರವರಿ 29, 2020
19 °C

ಪಾಲಿಕೆ ಸದಸ್ಯೆಗೆ ಕೈತಪ್ಪಿದ ಅಧ್ಯಕ್ಷ ಸ್ಥಾನ: ಬಿಜೆಪಿ ನಾಯಕರ ವಿರುದ್ಧ ಅಸಮಾಧಾನ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: 12 ಸ್ಥಾಯಿ ಸಮಿತಿ ಸದಸ್ಯರ ಸ್ಥಾನಗಳಿಗೆ ನಾಮಪತ್ರ ಸಲ್ಲಿಕೆ ಅವಧಿ ಮುಗಿದಿದ್ದು, ಎಲ್ಲ ಸ್ಥಾಯಿ ಸಮಿತಿಗಳಿಗೆ ಬಿಜೆಪಿಯಿಂದ 6 ಜನ, ಕಾಂಗ್ರೆಸ್ ನಿಂದ 4 ಹಾಗೂ  ಜೆಡಿಎಸ್ ನಿಂದ ಒಬ್ಬರು‌ ಸದಸ್ಯರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. 

ಈ ವೇಳೆ ವಿಜಯನಗರದ ಮಹಾಲಕ್ಷ್ಮಿ ಅಸಮಾಧಾನಗೊಂಡು ಕಣ್ಣೀರು ಹಾಕಿದ್ದಾರೆ.

ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನ ನೀಡುವುದಾಗಿ ಬಿಜೆಪಿ ನಾಯಕರು ಭರವಸೆ ನೀಡಿದ್ದರು. ಆದರೆ, ಕೊನೆಯ ಕ್ಷಣದಲ್ಲಿ ಅವಕಾಶ ತಪ್ಪಿಸಲಾಗಿದೆ. ಕಳೆದ ಬಾರಿಯೂ ಉಪಮೇಯರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲಾಗಿತ್ತು. ಆಗಲೂ ಕೊನೆಯ  ಕ್ಷಣದಲ್ಲಿ ರಾಮ ಮೋಹನ್ ರಾಜ್ ಅವರನ್ನು ಉಪ ಮೇಯರ್ ಮಾಡಿದರು. ಈ ಬಾರಿ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನ ನೀಡುವುದಾಗಿ ಭರವಸೆ ನೀಡಿದ್ದರು. ಆದರೀಗ  ಅಧ್ಯಕ್ಷ ಸ್ಥಾನವನ್ನೂ ನೀಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು