ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಬಿಬಿಎಂಪಿ ಚುನಾವಣೆ ಪೂರ್ವ ಸಿದ್ಧತಾ ಸಭೆ

Last Updated 24 ಜನವರಿ 2022, 11:56 IST
ಅಕ್ಷರ ಗಾತ್ರ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ದೃಷ್ಟಿಯಿಂದ ಪಕ್ಷವನ್ನು ಸಂಘಟಿಸಲು ರಾಜ್ಯ ಬಿಜೆಪಿ ಅಧ್ಯಕ್ಷರು ಮತ್ತು ಸಂಸದರಾದ ನಳಿನ್ ಕುಮಾರ್ ಕಟೀಲ್ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಮೂರು ದಿನಗಳ ಸಭೆ ಜನವರಿ 25, 26, 27 ರಂದು ನಡೆಯಲಿದೆ ಎಂದು ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾಣಾ ಅವರು ತಿಳಿಸಿದ್ದಾರೆ.

ಬೆಂಗಳೂರು ಉತ್ತರ ಜಿಲ್ಲೆ, ದಕ್ಷಿಣ ಜಿಲ್ಲೆ, ಮತ್ತು ಕೇಂದ್ರ ಜಿಲ್ಲಾ ಪದಾಧಿಕಾರಿಗಳು, ಮಂಡಳಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಶಾಸಕರು ಹಾಗೂ ಚುನಾಯಿತ ಜನಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಈ ಸಭೆ ಜರುಗಲಿದೆ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT