ಬುಧವಾರ, 29 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿಯವರು ಪ್ರಧಾನಿ ಆಗುವುದಿಲ್ಲ: ಡಿ.ಕೆ.ಶಿವಕುಮಾರ್‌

Published 12 ಮೇ 2024, 16:23 IST
Last Updated 12 ಮೇ 2024, 16:23 IST
ಅಕ್ಷರ ಗಾತ್ರ

ಬೆಂಗಳೂರು: ‘ಬಿಜೆಪಿಯವರು ಈ ಬಾರಿ ಪ್ರಧಾನಿ ಆಗುವುದಿಲ್ಲ. ಕಾಂಗ್ರೆಸ್‌ ನೇತೃತ್ವದ ಇಂಡಿಯಾ ಮೈತ್ರಿಕೂಟವೇ ಅಧಿಕಾರಕ್ಕೆ ಬರಲಿದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ವಿಶ್ವಾಸ ವ್ಯಕ್ತಪಡಿಸಿದರು. 

‘ನರೇಂದ್ರ ಮೋದಿ ಮತ್ತೆ ಪ್ರಧಾನಿಯಾದರೆ 75 ವರ್ಷ ವಯಸ್ಸಿನ ಮಿತಿಯ ಕಾರಣದಿಂದ ಒಂದು ವರ್ಷಕ್ಕೇ ಅಧಿಕಾರದಿಂದ ಕೆಳಗೆ ಇಳಿಸುತ್ತಾರೆ’ ಎಂಬ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಹೇಳಿಕೆ ಕುರಿತು ಸುದ್ದಿಗಾರರಿಗೆ ಭಾನುವಾರ ಪ್ರತಿಕ್ರಿಯಿಸಿದ ಅವರು, ‘ಬಿಜೆಪಿ ಬಹುಮತ ಪಡೆಯುವುದಿಲ್ಲ. ಆ ಪಕ್ಷದವರು ಪ್ರಧಾನಿಯಾಗಲು ಸಾಧ್ಯವೇ ಇಲ್ಲ’ ಎಂದರು.

‘ಈ ಚುನಾವಣೆಯಲ್ಲಿ ಕಾಂಗ್ರೆಸ್‌ ಮತ್ತು ಇಂಡಿಯಾ ಮೈತ್ರಿಕೂಟ ಆಡಳಿತ ನಡೆಸಲಿದೆ ಎಂಬ ವಿಶ್ವಾಸ ನನಗಿದೆ’ ಎಂದು ಹೇಳಿದರು.

ಹತಾಶೆಯ ಪ್ರತೀಕ: ‘ಈ ಚುನಾವಣೆಯಲ್ಲಿ ಪ್ರಧಾನಿಯವರು ಹತಾಶರಾಗಿದ್ದಾರೆ. ಆ ಕಾರಣಕ್ಕಾಗಿಯೇ ಕಾಂಗ್ರೆಸ್‌ ಹೆಚ್ಚು ಸ್ಥಾನ ಗಳಿಸುವುದಿಲ್ಲ ಎಂಬ ಹೇಳಿಕೆ ನೀಡುತ್ತಿದ್ದಾರೆ’ ಎಂದು ಗೃಹ ಸಚಿವ ಜಿ.ಪರಮೇಶ್ವರ ಭಾನುವಾರ ಪ್ರತಿಕ್ರಿಯಿಸಿದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT