ಸೋಮವಾರ, ಸೆಪ್ಟೆಂಬರ್ 20, 2021
23 °C

ಸಿಎಂ ಆಯ್ಕೆಗೆ ಬಿಜೆಪಿ ಸಭೆ; ಹೋಟೆಲ್‌ ಸುತ್ತ 150 ಪೊಲೀಸರ ಭದ್ರತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕ್ಯಾಪಿಟಲ್ ಹೊಟೇಲ್‌ ಹೊರಗೆ ಪೊಲೀಸ್‌ ಭದ್ರತೆ

ಬೆಂಗಳೂರು: ರಾಜಭವನ ರಸ್ತೆಯಲ್ಲಿರುವ ಕ್ಯಾಪಿಟಲ್ ಹೋಟೆಲ್‌ನಲ್ಲಿ ಶಾಸಕಾಂಗ ಪಕ್ಷದ ಸಭೆ ಆರಂಭವಾಗಿದ್ದು, ಹೋಟೆಲ್ ಹಾಗೂ ಅದರ ಸುತ್ತಲು 150 ಪೊಲೀಸರು ಭದ್ರತೆ ಕೈಗೊಂಡಿದ್ದಾರೆ.

ಸಭೆ ನಿಗದಿ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಕೇಂದ್ರ ವಿಭಾಗದ ಡಿಸಿಪಿ ಎಂ.ಎನ್. ಅನುಚೇತ್, ಸ್ಥಳಕ್ಕೆ ಬಂದು ಭದ್ರತೆ ಕೈಗೊಳ್ಳುವ ಬಗ್ಗೆ ಎಸಿಪಿ ಹಾಗೂ ಇನ್‌ಸ್ಪೆಕ್ಟರ್‌ಗಳಿಗೆ ಸೂಚನೆ ನೀಡಿದರು. ಹೋಟೆಲ್ ವ್ಯವಸ್ಥಾಪಕರ ಜೊತೆ ಚರ್ಚಿಸಿ ಭದ್ರತೆ ಬಗ್ಗೆ ಚರ್ಚಿಸಿದರು. 150 ಸಿಬ್ಬಂದಿಗಳನ್ನು ಹೋಟೆಲ್‌ ಬಳಿ ಕರೆಸಿಕೊಂಡ ಡಿಸಿಪಿ, ಭದ್ರತೆಗೆ ನಿಯೋಜಿಸಿದರು.

ಇದನ್ನೂ ಓದಿ: ಸಿಎಂ ಆಯ್ಕೆಗೆ ಕ್ಷಣಗಣನೆ: ಬೊಮ್ಮಾಯಿ, ಬೆಲ್ಲದ ಹೆಸರು ಮುಂಚೂಣಿಗೆ? | Prajavani

ಹೋಟೆಲ್ ಪ್ರವೇಶ ದ್ವಾರ ಹಾಗೂ  ಸುತ್ತಮುತ್ತಲ ಪ್ರತಿಯೊಂದು ಕಡೆಯೂ ಪೊಲೀಸರು ಕಾವಲು ಕಾಯುತ್ತಿದ್ದಾರೆ. ರಾಜಭವನ ರಸ್ತೆಯಲ್ಲಿ ವಾಹನಗಳ ಓಡಾಟ ಹೆಚ್ಚಿದ್ದು, ದಟ್ಟಣೆ ಉಂಟಾಗದಂತೆ ನೋಡಿಕೊಳ್ಳಲು ಸಂಚಾರ ಪೊಲೀಸರನ್ನು ನಿಯೋಜಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು