ಭಾನುವಾರ, ಏಪ್ರಿಲ್ 5, 2020
19 °C
ಮಧ್ಯಪ್ರದೇಶದ ಬಂಡಾಯ ಶಾಸಕರಿಂದ ಹೇಳಿಕೆ

ಬಿಜೆಪಿ ಸೇರುವ ನಿರ್ಧಾರ ಮಾಡಿಲ್ಲ: ಶಾಸಕರ ಹೇಳಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ತಾವು ಜ್ಯೋತಿರಾಧಿತ್ಯ ಸಿಂಧಿಯಾ ಅವರನ್ನು ಬೆಂಬಲಿಸುತ್ತಿದ್ದರೂ, ಬಿಜೆಪಿ ಸೇರುವ ಬಗ್ಗೆ ಇನ್ನೂ ನಿರ್ಧರಿಸಿಲ್ಲ ಎಂದು ಮಧ್ಯಪ್ರದೇಶದ ಕಾಂಗ್ರೆಸ್‌ನ ಬಂಡಾಯ ಶಾಸಕರು ಹೇಳಿದ್ದಾರೆ.

ನಗರದ ರೆಸಾರ್ಟ್‌ ಒಂದರಲ್ಲಿ ತಂಗಿರುವ ಅವರು, ಬಂಡಾಯ ಶಾಸಕರ ಇಚ್ಛೆಗೆ ವಿರುದ್ಧವಾಗಿ ಬೆಂಗಳೂರಿನಲ್ಲಿ ಅವರನ್ನು ಕೂಡಿ ಹಾಕಲಾಗಿದೆ ಎಂಬ ಸಿ.ಎಂ ಕಮಲನಾಥ್‌ ಹೇಳಿಕೆಯನ್ನು ಅಲ್ಲಗಳೆಯಲು ಹಾಗೂ ಅವರ ಕಾರ್ಯವೈಖರಿಯಿಂದಾಗಿಯೇ ಕಾಂಗ್ರೆಸ್‌ ಶಾಸಕರಲ್ಲಿ ಅಸಮಾಧಾನ ಇದೆ ಎಂಬುದನ್ನು ತಿಳಿಸಲು ಈ ಪತ್ರಿಕಾಗೋಷ್ಠಿ ನಡೆಸಲಾಗಿದೆ ಎಂದರು. ‘ನಮಗೆ ಕಮಲನಾಥ್‌ ಅವರಿಂದ ಬೆದರಿಕೆ ಇದೆ, ಹೀಗಾಗಿ ಕೇಂದ್ರೀಯ ಪಡೆಗಳಿಂದ ರಕ್ಷಣೆ ನೀಡಬೇಕು’ ಎಂದು ಶಾಸಕ ಗೋವಿಂದ್ ಸಿಂಗ್‌ ರಜಪೂತ್‌ ಹೇಳಿದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)