ಬುಧವಾರ, ಮಾರ್ಚ್ 3, 2021
19 °C

ಸೌಮ್ಯಾ ರೆಡ್ಡಿ ವಿರುದ್ಧ ಕ್ರಮಕ್ಕೆ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಮಹಿಳಾ ಕಾನ್‌ಸ್ಟೆಬಲ್‌ವೊಬ್ಬರ ಮೇಲೆ ಹಲ್ಲೆ ನಡೆಸಿದ ಕಾಂಗ್ರೆಸ್‌ ಶಾಸಕಿ ಸೌಮ್ಯಾರೆಡ್ಡಿ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು’ ಎಂದು ಬಿಜೆಪಿ ಮಹಿಳಾ ಮೋರ್ಚಾವು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಿದೆ.

ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಗೀತಾ ವಿವೇಕಾನಂದ ಅವರ ನೇತೃತ್ವದಲ್ಲಿ ಈ  ಸಂಬಂಧ ಮನವಿ ಸಲ್ಲಿಸಲಾಯಿತು.

‘ಪೊಲೀಸರು ತಮ್ಮ ಕರ್ತವ್ಯವನ್ನು ನಿರ್ವಹಿಸಲು ಬಿಡದೇ ಸೌಮ್ಯಾ ರೆಡ್ಡಿ ಉದ್ಧಟತನದಿಂದ ವರ್ತಿಸಿದ್ದಾರೆ. ರಾಜಕೀಯ ನಾಯಕರಿಗೆ ಸಲ್ಲದ ದುರ್ವರ್ತನೆ ಇದಾಗಿದೆ. ಮಾಜಿ ಗೃಹ ಸಚಿವರ ಮಗಳು ಇತರರಿಗೆ ಮಾದರಿ ಆಗುವಂತೆ ನಡೆದುಕೊಳ್ಳಬೇಕಿತ್ತು. ಇವರ ವರ್ತನೆ ಕಾರ್ಯಕರ್ತರಿಗೆ ಹಿಂಸೆಯಲ್ಲಿ ತೊಡಗಲು ಪ್ರಚೋದನೆ ನೀಡುವಂತಿದೆ. ಇದರಿಂದ ಕಾನೂನು ಸುವ್ಯವಸ್ಥೆಗೂ ಧಕ್ಕೆ ಆಗುವ ಸಾಧ್ಯತೆ ಇದೆ’ ಎಂದು ಗೀತಾ ಅವರು ಮನವಿಯಲ್ಲಿ ವಿವರಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು