ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯ ಬಿಜೆಪಿ: 22.77 ಲಕ್ಷ ಸದಸ್ಯತ್ವ ನೋಂದಣಿ

Last Updated 29 ಆಗಸ್ಟ್ 2019, 19:55 IST
ಅಕ್ಷರ ಗಾತ್ರ

ಬೆಂಗಳೂರು: ಬಿಜೆಪಿ ಸದಸ್ಯತ್ವ ನೋಂದಣಿ ಅಭಿಯಾನದಲ್ಲಿ ರಾಜ್ಯದಲ್ಲಿ 22.77 ಲಕ್ಷ ಸದಸ್ಯತ್ವ ನೋಂದಣಿಯಾಗಿದ್ದು, ದೇಶದಲ್ಲಿ ಐದನೇ ಸ್ಥಾನ ಪಡೆದಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ್‌ ತಿಳಿಸಿದ್ದಾರೆ.

ಸದಸ್ಯತ್ವ ಅಭಿಯಾನದ ಸಭೆಯು ಗುರುವಾರ ನವದೆಹಲಿಯಲ್ಲಿ ಪಕ್ಷದ ಕಾರ್ಯಾಧ್ಯಕ್ಷ ಜೆ.ಪಿ.ನಡ್ಡಾ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಭೆಯಲ್ಲಿ ರಾಜ್ಯದ ಸದಸ್ಯತ್ವ ಅಭಿಯಾನದ ವರದಿಯನ್ನು ಮಂಡಿಸಿದ್ದಾಗಿ ರವಿಕುಮಾರ್‌ ಹೇಳಿದರು.

ಸಭೆಯಲ್ಲಿ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್, ಸದಸ್ಯತಾ ಅಭಿಯಾನದ ರಾಷ್ಟ್ರೀಯ ಸಂಚಾಲಕ ಶಿವರಾಜಸಿಂಗ್‌ ಚವ್ಹಾಣ್, ರಾಷ್ಟ್ರೀಯ ಸಂಘಟನಾ ಚುನಾವಣಾ ಉಸ್ತುವಾರಿ ರಾಧಾಮೋಹನ ಸಿಂಗ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT