ಭಾನುವಾರ, 13 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಸೋಮಣ್ಣ ಚಾಲನೆ

Published : 6 ಸೆಪ್ಟೆಂಬರ್ 2024, 16:16 IST
Last Updated : 6 ಸೆಪ್ಟೆಂಬರ್ 2024, 16:16 IST
ಫಾಲೋ ಮಾಡಿ
Comments

ಬೆಂಗಳೂರು: ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಶುಕ್ರವಾರ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಸೋಮಣ್ಣ, ‘ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಮತ್ತು ಕಾಯಕ ಸಿದ್ದಾಂತದ ಅಡಿಯಲ್ಲಿ ಕೇಂದ್ರ ಸರ್ಕಾರ ಆಡಳಿತ ನಡೆಸುತ್ತಿದೆ. ಬಡವರು ಮತ್ತು ಮಧ್ಯಮ ವರ್ಗದವರು ಆರ್ಥಿಕವಾಗಿ ಸಬಲರಾಗಲು ಜನಧನ್, ಉಜ್ವಲ ಮತ್ತು ಪ್ರಧಾನಮಂತ್ರಿ ಆವಾಸ್ ಯೋಜನೆ, ಆಯುಷ್ಮಾನ್ ಭಾರತ್, ಮುದ್ರಾ ಯೋಜನೆಗಳು ಸಹಕಾರಿಯಾಗಿವೆ’ ಎಂದು ಹೇಳಿದರು.

ದೇಶದಲ್ಲಿ ಯುವ ಸಮುದಾಯದ ಸಂಖ್ಯೆ ಹೆಚ್ಚಿದ್ದು, ಅವರ ಸಾಮ್ಯರ್ಥ್ಯ ದೇಶದ ಅಭಿವೃದ್ದಿಗೆ ಬಳಕೆಯಾಗಬೇಕು ಎಂದರು.

ಈ ವೇಳೆ ಬಿಜೆಪಿ ಯುವ ಮೋರ್ಚಾ ರಾಜ್ಯ ಘಟಕದ ಮಾಜಿ ಉಪಾಧ್ಯಕ್ಷ ಡಾ.ಅರುಣ್ ಸೋಮಣ್ಣ, ಬಿಜೆಪಿ ಗೋವಿಂದರಾಜನಗರ ಮಂಡಲ ಸಮಿತಿ ಅಧ್ಯಕ್ಷ ವಿಶ್ವನಾಥಗೌಡ, ಮಹಾನಗರ ಪಾಲಿಕೆ ಮಾಜಿ ಸದಸ್ಯ ಮೋಹನ್ ಕುಮಾರ್, ಮಂಡಲ ಮಹಿಳಾ ಸಮಿತಿ ಅಧ್ಯಕ್ಷೆ ರತ್ನಮ್ಮ, ಮುಖಂಡರಾದ ಸಿ.ಎಂ.ರಾಜಪ್ಪ, ಶ್ರೀಧರ್, ಎಚ್.ರಮೇಶ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT