ಶನಿವಾರ, ಸೆಪ್ಟೆಂಬರ್ 25, 2021
25 °C

‘ಕಾಂಗ್ರೆಸ್‌, ಜೆಡಿಎಸ್‌ ಪಕ್ಷಗಳಿಂದ ಅಲ್ಪಸಂಖ್ಯಾತರ ಅಭಿವೃದ್ಧಿಯಾಗಿಲ್ಲ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕಾಂಗ್ರೆಸ್‌, ಜೆಡಿಎಸ್‌ ಸೇರಿದಂತೆ ವಿರೋಧ ಪಕ್ಷಗಳಿಂದ ಅಲ್ಪಸಂಖ್ಯಾತರ ಅಭಿವೃದ್ಧಿ ಆಗಿಲ್ಲ. ಬಿಜೆಪಿಯು ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಗರಿಷ್ಠ ಪ್ರಮಾಣದ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ಅಲ್ಪಸಂಖ್ಯಾತರ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ಜಮಾಲ್‌ ಸಿದ್ದಿಕ್ಕಿ ಭಾನುವಾರ ಹೇಳಿದರು.

ನಗರದಲ್ಲಿ ನಡೆದ ಬಿಜೆಪಿ ಅಲ್ಪಸಂಖ್ಯಾತರ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಉದ್ಘಾಟಿಸಿ ಮಾತನಾಡಿದ ಅವರು, ‘ಕಾಂಗ್ರೆಸ್‌, ಜೆಡಿಎಸ್‌ ಸೇರಿದಂತೆ ಇತರ ಪಕ್ಷಗಳು ಕೇವಲ ಕುಟುಂಬ ರಾಜಕಾರಣಕ್ಕೆ ಸೀಮಿತವಾಗಿವೆ’ ಎಂದು ಟೀಕಿಸಿದರು.

ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌. ಅಶ್ವತ್ಥನಾರಾಯಣ ಮಾತನಾಡಿ, ‘ವಿರೋಧ ಪಕ್ಷಗಳು ಅಧಿಕಾರಕ್ಕಾಗಿ ಜನರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿವೆ. ಬಿಜೆಪಿ ಅಲ್ಪಸಂಖ್ಯಾತರ ವಿರುದ್ಧವಾಗಿದೆ ಎಂದು ಬಿಂಬಿಸುವ ಪ್ರಯತ್ನ ಮಾಡುತ್ತಿವೆ. ಈ ಅಭಿಪ್ರಾಯವನ್ನು ತೊಡೆದುಹಾಕಲು ಪಕ್ಷದ ಕಾರ್ಯಕರ್ತರು ಶ್ರಮಿಸಬೇಕು’ ಎಂದು ಸಲಹೆ ನೀಡಿದರು.

‘ದೇಶದ ಅಭಿವೃದ್ಧಿಯ ಕುರಿತು ನಮ್ಮಲ್ಲಿ ಸ್ಪಷ್ಟತೆ ಇರಬೇಕು. ಹಿಂದೂ, ಮುಸ್ಲಿಂ, ಕ್ರೈಸ್ತ ಧರ್ಮೀಯರ ನಡುವೆ ಸ್ಪರ್ಧೆ ಬೇಡ. ನಾವು ಅಮೆರಿಕ, ಜಪಾನ್ ಸೇರಿದಂತೆ ಬೇರೆ ದೇಶಗಳ ಜತೆ ಸ್ಪರ್ಧಿಸಲು ಸಿದ್ಧರಾಗಬೇಕು’ ಎಂದರು.

ಬಿಜೆಪಿ ಅಲ್ಪಸಂಖ್ಯಾತರ ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸೈಯದ್‌ ಇಬ್ರಾಹಿಂ ಮಾತನಾಡಿದರು. ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಎನ್‌. ರವಿಕುಮಾರ್, ಕಾರ್ಯದರ್ಶಿ ಜಗದೀಶ್ ಹಿರೇಮನಿ, ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಖ್ತಾರ್‌ ಪಠಾಣ್‌, ಬಿಜೆಪಿ ಅಲ್ಪಸಂಖ್ಯಾತರ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಮುಜಾಮಿಲ್‌ ಅಹ್ಮದ್‌ ಬಾಬು, ಹಜ್‌ ಸಮಿತಿ ಅಧ್ಯಕ್ಷ ರವೂಫುದ್ದೀನ್‌ ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು