ಗುರುವಾರ , ನವೆಂಬರ್ 26, 2020
21 °C

ಕುಂಚಿಟಿಗರನ್ನು ಒಬಿಸಿಗೆ ಸೇರಿಸಿ: ಹಾಲಪ್ಪ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ರಾಜ್ಯದಲ್ಲಿ 25 ಲಕ್ಷ ಮಂದಿ ಕುಂಚಿಟಿಗ ಸಮುದಾಯಕ್ಕೆ ಸೇರಿದ್ದಾರೆ. ಸಮುದಾಯದ ಅಭಿವೃದ್ಧಿಗಾಗಿ ಕುಂಚಿಟಿಗರನ್ನು 'ಇತರೆ ಹಿಂದುಳಿದ ವರ್ಗಗಳ' (ಒಬಿಸಿ) ಪಟ್ಟಿಗೆ ಸೇರಿಸಬೇಕು' ಎಂದು ಸಮುದಾಯದ ಮುಖಂಡ ಮುರಳೀಧರ ಹಾಲಪ್ಪ ಒತ್ತಾಯಿಸಿದರು.

ವಿಶ್ವ ಕುಂಚಿಟಿಗರ ಪರಿಷತ್ ವತಿಯಿಂದ ಶನಿವಾರ ಹಮ್ಮಿಕೊಳ್ಳಲಾಗಿದ್ದ ವಿ.ಅಂಜನಪ್ಪ ಅವರು ರಚಿಸಿರುವ 'ಕುಂಚಿಟಿಗ ಇತಿಹಾಸ' ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

'ಕುಂಚಿಟಿಗರಿಗೆ ಹಾಗೂ ಸಂಘ ಸಂಸ್ಥೆಗಳಿಗೆ ನಿವೇಶನ ಒದಗಿಸಬೇಕು. ರಾಜರಾಜೇಶ್ವರಿ ನಗರದ ವಿಧಾನಸಭಾ ಕ್ಷೇತ್ರದಲ್ಲಿ ಕುಂಚಿಟಿಗ ಸಮುದಾಯದ 28 ಸಾವಿರ ಮಂದಿ ಇದ್ದಾರೆ. ಪಾಲಿಕೆ ಚುನಾವಣೆಗಳಲ್ಲಿ ಸಮುದಾಯಕ್ಕಾಗಿ ಮೂರು ವಾರ್ಡ್‍ಗಳನ್ನು ಮೀಸಲಿಡಬೇಕು' ಎಂದು ಮನವಿ ಮಾಡಿದರು.

ಸಂಸದ ಡಿ.ಕೆ.ಸುರೇಶ್, 'ಕುಂಚಿಟಿಗ ಸಮುದಾಯದೊಂದಿಗೆ ಸದಾ ಇರುತ್ತೇವೆ. ರಾಜರಾಜೇಶ್ವರಿ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಎಚ್.ಅವರನ್ನು ಗೆಲ್ಲಿಸುವ ಜವಾಬ್ದಾರಿ ನಿಮ್ಮದು' ಎಂದರು.

ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್,'ಕುಂಚಿಟಿಗ ಸಮುದಾಯವನ್ನು ಒಬಿಸಿ ಪಟ್ಟಿಗೆ ಸೇರಿಸಲು ಸಂಸತ್‍ನಲ್ಲಿ ಮೊಟ್ಟಮೊದಲ ಬಾರಿಗೆ ದನಿ ಎತ್ತಿದ್ದೆ. ಮುಂದಿನ ಅಧಿವೇಶನದಲ್ಲಿ ಕಾರ್ಯರೂಪಕ್ಕೆ ತರಲು ಪ್ರಯತ್ನಿಸುತ್ತೇನೆ' ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು