ಮಂಗಳವಾರ, ಮಾರ್ಚ್ 9, 2021
28 °C

ಮಾನಸಿಕ ಸ್ಥಿಮಿತ ಕಳಕೊಂಡ ಯತ್ನಾಳ್: ವಿಶ್ವನಾಥ್‌ ಕಿಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಲಹಂಕ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಎಚ್.ವಿಶ್ವನಾಥ್ ಮಾನಸಿಕ ಸ್ಥಿಮಿತ ಕಳೆದುಕೊಂಡವರಂತೆ ಬಾಯಿಗೆ ಬಂದಂತೆ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಬಿಜೆಪಿಯ
ಲ್ಲಿದ್ದುಕೊಂಡೇ ಇಂತಹ ದ್ರೋಹವೆಸಗುವವರನ್ನು ಕೂಡಲೇ ಪಕ್ಷದಿಂದ ಉಚ್ಛಾಟಿಸಬೇಕು ಎಂದು ಶಾಸಕ ಎಸ್.ಆರ್.ವಿಶ್ವನಾಥ್ ಹೇಳಿದರು.

ನೂತನವಾಗಿ ಆಯ್ಕೆಯಾಗಿರುವ ಗ್ರಾಮ ಪಂಚಾಯಿತಿ ಸದಸ್ಯರಿಗಾಗಿ ಸಿಂಗನಾಯಕನಹಳ್ಳಿಯಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ’ಬಿಜೆಪಿಯು ತತ್ವ, ಸಿದ್ಧಾಂತಗಳ ತಳಹದಿಯ ಮೇಲೆ ಬೆಳೆದು ಬಂದಿರುವ ಶಿಸ್ತಿನ ಪಕ್ಷ. ಪಕ್ಷಕ್ಕೆ ಮುಜುಗರ ತರುವ ರೀತಿಯಲ್ಲಿ ಮುಖ್ಯಮಂತ್ರಿಗಳು ಹಾಗೂ ಬಿಜೆಪಿ ನಾಯಕರ ವಿರುದ್ಧ ಹೇಳಿಕೆಗಳನ್ನು ನೀಡುವ ಮೂಲಕ ಬಿಜೆಪಿಗೆ ಹಾನಿಮಾಡಲು ಹೊರಟಿರುವ ಇಂತಹ ನಾಯಕರ ಅವಶ್ಯಕತೆ ಪಕ್ಷಕ್ಕಿಲ್ಲ‘ ಎಂದರು.

ದೊಡ್ಡಬಳ್ಳಾಪುರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿಬ್ಬೂರು ಜಯಣ್ಣ, ಜಿಲ್ಲಾ ಪಂಚಾಯಿತಿ ಸದಸ್ಯ ಉದ್ದಂಡಯ್ಯ, ಮಾಜಿ ಅಧ್ಯಕ್ಷೆ ವಾಣಿಶ್ರೀ ವಿಶ್ವನಾಥ್, ಬಿಜೆಪಿ ಮುಖಂಡರಾದ ಎಸ್.ಎನ್.ರಾಜಣ್ಣ, ಕಡತನಮಲೆ ಸತೀಶ್, ಹನುಮೇಗೌಡ, ಎಂ.ಸತೀಶ್, ಮುನಿದಾಸಪ್ಪ ಮತ್ತಿತರರು ಉಪಸ್ಥಿತರಿದ್ದರು.

 

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು