ಬೆಂಗಳೂರು: ದಿವಂಗತ ಪ್ರಧಾನಿ ಇಂದಿರಾಗಾಂಧಿ ಅವರನ್ನು ಹಿಟ್ಲರ್ಗೆ ಹೋಲಿಸಿ, ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದ ಬಿಜೆಪಿ ಧೋರಣೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಿದರು.

ಕೇಂದ್ರ ಸಚಿವ ಭೂಪೇಂದರ್ ಯಾದವ್ ಅವರು ಕಚೇರಿಗೆ ಭೇಟಿ ನೀಡಿದ್ದ ವೇಳೆಯೇ ಮುತ್ತಿಗೆ ಹಾಕುವ ಪ್ರಯತ್ನ ಮಾಡಿದರು. ಪೊಲೀಸರು ಅವರನ್ನು ವಶಕ್ಕೆ ಪಡೆದರು. ‘ದಿಟ್ಟ ನಡೆಯ ಇಂದಿರಾ ಅವರಿಗೆ ಅವಮಾನ ಮಾಡಿದ ಬಿಜೆಪಿ ದೇಶದ ಜನರ ಕ್ಷಮೆಯಾಚಿಸಬೇಕು. ಸಂವಿಧಾನ ವಿರೋಧಿ ಮನೋಸ್ಥಿತಿಯ ಅವರಿಗೆ ಇಂದಿರಾ ಅವರಂತಹ ಜನಪರ ನಾಯಕಿಯ ನಡೆಯನ್ನು ಸಹಿಸಲು ಇಂದಿಗೂ ಸಾಧ್ಯವಾಗುತ್ತಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಬಿಜೆಪಿ ಕಾರ್ಯಕರ್ತರು ಹಿಂದಕ್ಕೆ ತಳ್ಳುವ ಪ್ರಯತ್ನ ಮಾಡಿದರು. ಅಷ್ಟರಲ್ಲಿ ಪೊಲೀಸರು ಮಧ್ಯ ಪ್ರವೇಶಿಸಿ, ಪರಿಸ್ಥಿತಿ ತಿಳಿಗೊಳಿಸಿದರು.

‘ಕೇಂದ್ರ ಸಚಿವರು ಬಂದಾಗ ಮುತ್ತಿಗೆ ಹಾಕಿದರೂ, ಪೊಲೀಸರು ಎಫ್ಐಆರ್ ದಾಖಲಿಸಿಲ್ಲ. ಸರ್ಕಾರ ಹೇಳಿದಂತೆ ಪೊಲೀಸರು ನಡೆದುಕೊಳ್ಳುತ್ತಿದ್ದಾರೆ’ ಎಂದು ವಿಧಾನ ಪರಿಷತ್ನ ವಿರೋಧ ಪಕ್ಷದ ಮುಖ್ಯಸಚೇತಕ ಎನ್.ರವಿಕುಮಾರ್ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.