ಶನಿವಾರ, 7 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಒತ್ತಾಯ

ಸ್ವಾತಂತ್ರ್ಯ ಉದ್ಯಾನದಲ್ಲಿ ಬಿಜೆಪಿ ಪ್ರತಿಭಟನೆ
Published 22 ಆಗಸ್ಟ್ 2024, 15:54 IST
Last Updated 22 ಆಗಸ್ಟ್ 2024, 15:54 IST
ಅಕ್ಷರ ಗಾತ್ರ

ಬೆಂಗಳೂರು: ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರವು ರಾಜ್ಯಪಾಲರಿಗೆ ಅವಮಾನ ಮಾಡಿದೆ ಎಂದು ಆರೋಪಿಸಿ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಗುರುವಾರ ಪ್ರತಿಭಟನೆ ನಡೆಸಿದ ಬಿಜೆಪಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿತು.

ದಲಿತರಿಗೆ ಮೀಸಲಿಟ್ಟ ಹಣ ವರ್ಗಾವಣೆ ಪ್ರಕರಣ, ವಾಲ್ಮೀಕಿ ನಿಗಮದ ಹಗರಣ, ಮುಡಾ ಹಗರಣ- ಇವೆಲ್ಲವೂ ದಲಿತ ಸಮುದಾಯಕ್ಕೆ ಸೇರಿದ ವಿಚಾರಗಳು. ದಲಿತರಿಗೆ ಅನ್ಯಾಯ ಮಾಡಿದ ಮುಖ್ಯಮಂತ್ರಿಗಳು ರಾಜೀನಾಮೆ ಕೊಡಬೇಕು ಎಂದು ಮುಖಂಡರು ಆಗ್ರಹಿಸಿದರು.

ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಚಲವಾದಿ ನಾರಾಯಣಸ್ವಾಮಿ ಮಾತನಾಡಿ, ‌ ‘ಹಿಂದುಳಿದ ವರ್ಗದ ನಾಯಕನೆಂಬ ಕಾರಣಕ್ಕೆ ತೊಂದರೆ ಕೊಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಹಾಗಿದ್ದರೆ ಈ ದೇಶದ ಪ್ರಧಾನ ಮಂತ್ರಿ ಯಾರು? ಅವರು ಕೂಡ ಹಿಂದುಳಿದವರು. ಆದರೆ ಅವರು ಕಳಂಕರಹಿತರು’ ಎಂದರು.

ಡಾ. ಸಿ.ಎನ್‌. ಅಶ್ವತ್ಥ ನಾರಾಯಣ ಮಾತನಾಡಿ, ‘ಭ್ರಷ್ಟ ಸರ್ಕಾರದ ವಿರುದ್ಧ ಜನಜಾಗೃತಿ ಮೂಡಿಸಬೇಕು. ಲೂಟಿ ಹೊಡೆಯುವುದೇ ಕಾಂಗ್ರೆಸ್ ಸರ್ಕಾರದ ನೀತಿಯಾಗಿದೆ. ಸಂವಿಧಾನ ಕೈಯಲ್ಲಿ ಹಿಡಿದು ಹಕ್ಕುಗಳ ಕುರಿತು ಮಾತನಾಡುತ್ತಾರೆ. ಆದರೆ, ಸಂವಿಧಾನದ ಆಶಯಗಳನ್ನು ಗೌರವಿಸುವುದಿಲ್ಲ. ರಾಜಭವನಕ್ಕೆ ನುಗ್ಗಿ ಹಲ್ಲೆ ಮಾಡುವುದಾಗಿ ಹೇಳುತ್ತಾರೆ’ ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಮಾತನಾಡಿ, ‘ಮುಡಾ ಹಗರಣ ತನಿಖೆಯನ್ನು ಸಿಬಿಐಗೆ ಕೊಡಬೇಕು. ವೈಟ್ನರ್‌ ಹಚ್ಚಿದ್ದು ತಮ್ಮ ಸರ್ಕಾರದ ಅವಧಿಯಲ್ಲಿ ಅಲ್ಲ ಎಂದು ಧರ್ಮಸ್ಥಳದ ಮಂಜುನಾಥನ ಸನ್ನಿಧಿಯಲ್ಲಿ ಪ್ರಮಾಣ ಮಾಡಿ ಹೇಳಬೇಕು’ ಎಂದು ಸಿದ್ದರಾಮಯ್ಯ ಅವರಿಗೆ ಸವಾಲು ಹಾಕಿದರು.

ಶಾಸಕರಾದ ಮುನಿರತ್ನ, ಗೋಪಾಲಯ್ಯ, ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ, ಬಿಜೆಪಿ ರೈತ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ಬೆಂಗಳೂರು ಕೇಂದ್ರ ಜಿಲ್ಲಾ ಘಟಕದ ಅಧ್ಯಕ್ಷ ಸಪ್ತಗಿರಿ ಗೌಡ, ಬೆಂಗಳೂರು ದಕ್ಷಿಣ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಕೆ. ರಾಮಮೂರ್ತಿ ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT