ಬೆಂಗಳೂರು: ಬಹುನಿರೀಕ್ಷಿತ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ಚುನಾವಣಾ ಉಸ್ತುವಾರಿಗಳನ್ನು ನೇಮಕ ಮಾಡಿದೆ.

ಈ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಆದೇಶ ಹೊರಡಿಸಿದ್ದಾರೆ.

ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಅವರನ್ನು ಚುನಾವಣಾ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ.

ಸಹ-ಉಸ್ತುವಾರಿಗಳಾಗಿ ರಾಜಸ್ಥಾನ ಬಿಜೆಪಿಯ ಸತೀಶ್ ಪೂನಿಯಾ ಹಾಗೂ ಮಹಾರಾಷ್ಟ್ರದ ಬಿಜೆಪಿ ಶಾಸಕ ಸಂಜಯ್ ಉಪಾಧ್ಯಾಯ ಅವರನ್ನು ನೇಮಕ ಮಾಡಲಾಗಿದೆ.

ಬಿಜೆಪಿ ಚುನಾವಣಾ ಕಾರ್ಯತಂತ್ರಗಳಲ್ಲಿ ಪ್ರಮುಖ ಪಾತ್ರವಹಿಸುತ್ತಿರುವ ರಾಮ್ ಮಾಧವ್ ಅವರು ಕಳೆದ ಜಮ್ಮು ಮತ್ತು ಕಾಶ್ಮೀರ ಚುನಾವಣೆಯಲ್ಲಿ ಪ್ರಮುಖ ಪಾತ್ರವಹಿಸಿದ್ದರು. 2018ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲೂ ರಾಮ್ ಮಾಧವ್ ಚುನಾವಣೆ ಉಸ್ತುವಾರಿಯಾಗಿ ಕೆಲಸ ಮಾಡಿದ್ದರು.
.ಜಿಬಿಎ ಚುನಾವಣೆಗೆ ತರಾತುರಿ ಏಕೆ?.ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆ: ಇವಿಎಂ ಬದಲು ಮತಪತ್ರ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.