ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪ್ಪ, ಮಗಳ ರಾಜಕೀಯಕ್ಕೆ ಅಂತ್ಯ ಹಾಡಬೇಕು: ನಳಿನ್ ಕುಮಾರ್

Last Updated 21 ಜನವರಿ 2023, 16:43 IST
ಅಕ್ಷರ ಗಾತ್ರ

ಬೆಂಗಳೂರು: ‘ಅಪ್ಪ (ರಾಮಲಿಂಗಾರೆಡ್ಡಿ)– ಮಗಳ (ಸೌಮ್ಯಾ ರೆಡ್ಡಿ) ರಾಜಕೀಯಕ್ಕೆ ಅಂತ್ಯ ಹಾಡಿ, ಎರಡೂ ಕ್ಷೇತ್ರಗಳಲ್ಲಿ ಕಮಲ ಅರಳಿಸಲು ಬಿಜೆಪಿ ಕಾರ್ಯಕರ್ತರು ಸಂಕಲ್ಪ ಮಾಡಬೇಕು’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಕರೆ ನೀಡಿದರು.

ಬಿಟಿಎಂ ಬಡಾವಣೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಬಿ.ಟಿ.ಎಂ. ಒಂದನೇ ಹಂತದ ಬಡಾವಣೆ ಹಾಗೂ ಜಯನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಬೈರಸಂದ್ರದಲ್ಲಿ ಶನಿವಾರ ಬಿಜೆಪಿಯ ‘ಬೂತ್‌ ವಿಜಯ ಸಂಕಲ್ಪ ಅಭಿಯಾನ’ದಲ್ಲಿ ಅವರು ಮಾತನಾಡಿದರು.

ರಾಜ್ಯದಾದ್ಯಂತ ವಿಜಯ ಸಂಕಲ್ಪ ಅಭಿಯಾನ ಆರಂಭವಾಗಿದೆ. ಬಿಟಿಎಂ ಬಡಾವಣೆ ಮತ್ತು ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಅಪ್ಪ– ಮಗಳು ಮತ್ತೆ ಗೆಲುವು ಸಾಧಿಸಲು ಬಿಡಬಾರದು. ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲು ಪಕ್ಷದ ಕಾರ್ಯಕರ್ತರು ಶ್ರಮ ವಹಿಸಬೇಕು ಎಂದರು.

‘ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಬಿಜೆಪಿಯ ಭ್ರಷ್ಟರನ್ನು ಜೈಲಿಗೆ ಕಳುಹಿಸಲಾಗುವುದು’ ಎಂಬ ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್‌ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಬಿಜೆಪಿಯವರನ್ನು ಜೈಲಿಗೆ ಕಳುಹಿಸಲು ಯಾರಿಂದಲೂ ಸಾಧ್ಯವಿಲ್ಲ. ಹಿಂದೆ ಇಂದಿರಾ ಗಾಂಧಿಯವರು ಪ್ರಧಾನಿಯಾಗಿದ್ದ ಅವಧಿಯಲ್ಲಿ ಅಧಿಕಾರ ದುರ್ಬಳಕೆ ಮಾಡಿಕೊಂಡು ಬಿಜೆಪಿ ನಾಯಕರನ್ನು ಜೈಲಿಗೆ ಕಳುಹಿಸಿ ಪಕ್ಷ ಮುಗಿಸಲು ಪ್ರಯತ್ನಿಸಿದ್ದರು. ಅವರಿಗೂ ಯಶಸ್ಸು ಸಿಕ್ಕಿರಲಿಲ್ಲ’ ಎಂದು ಹೇಳಿದರು.

ಸಂಸದ ತೇಜಸ್ವಿ ಸೂರ್ಯ, ಶಾಸಕ ಎಲ್‌.ಎ. ರವಿಸುಬ್ರಮಣ್ಯ, ಬಿಜೆಪಿ ದಕ್ಷಿಣ ಜಿಲ್ಲಾ ಘಟಕದ ಅಧ್ಯಕ್ಷ ಎನ್‌.ಆರ್‌. ರಮೇಶ್‌, ಮುಖಂಡ ಎಸ್‌.ಕೆ. ನಟರಾಜ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT