ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮದ್ಯ ಹಂಚಿಕೆ: ಬಿಜೆಪಿ ತಾಲ್ಲೂಕು ಅಧ್ಯಕ್ಷ ಉಚ್ಛಾಟನೆ

Published 9 ಜುಲೈ 2024, 16:31 IST
Last Updated 9 ಜುಲೈ 2024, 16:31 IST
ಅಕ್ಷರ ಗಾತ್ರ

ನೆಲಮಂಗಲ: ಸಂಸದ ಡಾ.ಕೆ.ಸುಧಾಕರ್ ಅವರ ಅಭಿನಂದನಾ ಸಮಾರಂಭದಲ್ಲಿ ಮದ್ಯ ಹಂಚಿಕೆ ಮಾಡಿದ ಆರೋಪದ ಕಾರಣದಿಂದ ಬಿಜೆಪಿಯ ತಾಲ್ಲೂಕು ಘಟಕದ ಅಧ್ಯಕ್ಷ ಜಗದೀಶ್ ಚೌಧರಿ ಅವರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟಿಸಲಾಗಿದೆ.

ಸಮೀಪದ ಭಾವಿಕೆರೆ ಬಳಿ ಭಾನುವಾರ(ಜು.7) ಬಿಜೆಪಿ–ಜೆಡಿಎಸ್‌ ಪಕ್ಷಗಳ ವತಿಯಿಂದ ಸಂಸದರಿಗೆ ಅಭಿನಂದನಾ ಸಮಾರಂಭ ಆಯೋಜಿಸಿತ್ತು. ಕಾರ್ಯಕ್ರಮದಲ್ಲಿ ಭಾಗವಹಿಸಿದವರಿಗೆ ಬಹಿರಂಗವಾಗಿಯೇ ಮದ್ಯ ಹಂಚಲಾಗಿತ್ತು. ಇದಕ್ಕೆ ಸಂಬಂಧಿಸಿದ ವಿಡಿಯೊ ತುಣುಕುಗಳು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡಿದ್ದವು. ಮದ್ಯ ಹಂಚಿಕೆಗೆ ಸಾರ್ವಜನಿಕರಿಂದ ಟೀಕೆಗಳೂ ಬಂದಿದ್ದವು.

‘ಈ ಘಟನೆ ಪಕ್ಷದ ಶಿಸ್ತಿನ ಸ್ಪಷ್ಟ ಉಲ್ಲಂಘನೆಯಾಗಿದೆ. ಈ ಕಾರಣದಿಂದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಸೂಚನೆ  ಮೇರೆಗೆ ಜಗದೀಶ್ ಚೌಧರಿ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ’ ಎಂದು ಬಿಜೆಪಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಎಚ್‌.ಆರ್. ರಾಮಕೃಷ್ಣ ಆದೇಶ ಹೊರಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT