ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಬಿಜೆಪಿಯಿಂದ ಸೋನಿಯಾ ಟೀಕೆ ಅಸಮಂಜಸ’

Last Updated 10 ಏಪ್ರಿಲ್ 2020, 21:21 IST
ಅಕ್ಷರ ಗಾತ್ರ

ಬೆಂಗಳೂರು: ‘ಕೋವಿಡ್-19’ ತಡೆಗೆ ಸಂಬಂಧಿಸಿದಂತೆ ಯಾವುದೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದೆ ಲಾಕ್‍ಡೌನ್ ಘೋಷಿಸಿದ ಕೇಂದ್ರ ಸರ್ಕಾರದ ಕ್ರಮವನ್ನು ವಿಶ್ಲೇಷಿಸಿದ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಅವಹೇಳನಕಾರಿಯಾಗಿ ನಿಂದಿಸಿರುವ ಕೇಂದ್ರ ಗೃಹಸಚಿವ ಅಮಿತ್‌ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ನಡೆ ಸರಿಯಲ್ಲ’ ಎಂದು ಕಾಂಗ್ರೆಸ್‌ ಮುಖಂಡ ಬಿ.ಕೆ. ಚಂದ್ರಶೇಖರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ಸೋನಿಯಾರ ಹೇಳಿಕೆ ಅಸಭ್ಯ ಮತ್ತು ಅಶ್ಲೀಲ ಎಂದು ನಡ್ಡಾ ಹೇಳಿದ್ದಾರೆ. ಬಹುಶಃ ಅವರಿಗೆ ಆ ಪದದ ಅರ್ಥವೇ ತಿಳಿದಿಲ್ಲ ಎನಿಸುತ್ತದೆ’ ಎಂದೂ ಅವರು ವ್ಯಂಗ್ಯವಾಡಿದ್ದಾರೆ.

‘ದೇಶದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರಕ್ಕೆ ಸಂಪೂರ್ಣವಾಗಿ ಸಹಕಾರ ನೀಡುವುದಾಗಿ ಸೋನಿಯಾ ಗಾಂಧಿ ಘೋಷಿಸಿದ್ದಲ್ಲದೆ, 21 ದಿನಗಳ ಲಾಕ್‌ಡೌನ್‌ ಅಗತ್ಯವಿತ್ತು ಎಂದೂ ಪ್ರತಿಪಾದಿಸಿದ್ದರು. ಆದರೆ, ಈ ನಿರ್ಧಾರ ಕೈಗೊಳ್ಳುವ ಮುನ್ನ, ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಿತ್ತು. ಇದರಿಂದ ಕೋಟ್ಯಂತರ ಕಾರ್ಮಿಕರ ಸಾವು–ನೋವು ತಪ್ಪಿಸಬಹುದಿತ್ತು ಎನ್ನುವುದು ಸೋನಿಯಾರ ಅಭಿಮತವಾಗಿತ್ತು’ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT