ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಪ್ಪು ಶಿಲೀಂಧ್ರ: ನಿಮ್ಹಾನ್ಸ್‌ಗೆ ಬಾಲಕ ಸ್ಥಳಾಂತರ

Last Updated 28 ಮೇ 2021, 21:53 IST
ಅಕ್ಷರ ಗಾತ್ರ

ಬೆಂಗಳೂರು: ಕಪ್ಪು ಶಿಲೀಂಧ್ರ ಸೋಂಕು ತಗುಲಿ ನಗರದ ಬೌರಿಂಗ್ ಆಸ್ಪತ್ರೆಗೆ ದಾಖಲಾಗಿದ್ದ ಮೈಸೂರಿನ 11 ವರ್ಷದ ಬಾಲಕನಿಗೆ ಹೆಚ್ಚಿನ ತಪಾಸಣೆ ನಡೆಸಲು ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಗೆ (ನಿಮ್ಹಾನ್ಸ್) ಸ್ಥಳಾಂತರ ಮಾಡಲಾಗಿದೆ.

ಕೋವಿಡ್‌ನಿಂದ ಚೇತರಿಸಿಕೊಂಡಿದ್ದ ಬಾಲಕ ಶಿಲೀಂಧ್ರ ಸೋಂಕಿತನಾಗಿ, ಗಂಭೀರವಾಗಿ ಅಸ್ವಸ್ಥಗೊಂಡಿದ್ದ. ಪರೀಕ್ಷೆ ನಡೆಸಿದ ಬೌರಿಂಗ್ ಆಸ್ಪತ್ರೆಯ ವೈದ್ಯರು ಮಿದುಳಿಗೆ ಸೋಂಕು ಹರಡಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. ಹೀಗಾಗಿ, ಹೆಚ್ಚಿನ ತಪಾಸಣೆಯ ಸಂಬಂಧ ನಿಮ್ಹಾನ್ಸ್‌ಗೆ ಶುಕ್ರವಾರ ದಾಖಲಿಸಲಾಗಿದೆ. ಅಲ್ಲಿನ ನರರೋಗ ತಜ್ಞರು ವಿವಿಧ ಪರೀಕ್ಷೆಗಳನ್ನು ನಡೆಸಿ, ಚಿಕಿತ್ಸೆ ನೀಡಲಾರಂಭಿಸಿದ್ದಾರೆ.

ನಗರದಲ್ಲಿ ಹೊಸದಾಗಿ 19 ಕಪ್ಪು ಶಿಲೀಂಧ್ರ ಸೋಂಕು ಪ್ರಕರಣಗಳು ದೃಢಪಟ್ಟಿವೆ. 8 ಮಂದಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದವರಲ್ಲಿ ಒಬ್ಬರು ಚೇತರಿಸಿಕೊಂಡು ಮನೆಗೆ ತೆರಳಿದ್ದಾರೆ.ಸದ್ಯ 67 ಮಂದಿಗೆ ಚಿಕಿತ್ಸೆ ಒದಗಿಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT