ಬುಧವಾರ, ನವೆಂಬರ್ 20, 2019
27 °C

ಅಶ್ಲೀಲ ವಿಡಿಯೊ ಚಿತ್ರೀಕರಿಸಿಕೊಂಡು ಬ್ಲ್ಯಾಕ್‌ಮೇಲ್: ಆರೋಪಿ ವಶಕ್ಕೆ

Published:
Updated:

ಬೆಂಗಳೂರು: ಕನ್ನಡ ಸಿನಿಮಾವೊಂದರ ಚಿತ್ರೀಕರಣ ವೇಳೆ ಪರಿಚಯವಾದ ಯುವತಿ ಜೊತೆ ಸಲುಗೆ ಬೆಳೆಸಿ ಅಶ್ಲೀಲ ವಿಡಿಯೊಗಳನ್ನು ಚಿತ್ರೀಕರಿಸಿಕೊಂಡು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಯುವಕನನ್ನು ಬಾಗಲಗುಂಟೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

25 ವರ್ಷದ ಯುವತಿ ನೀಡಿರುವ ದೂರಿನಡಿ ಆರೋಪಿ ಸೂರಜ್‌ ಗೌಡ ಅಲಿಯಾಸ್ ಶಿವು ಪಾಟೀಲ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ.

ಆರೋಪಿ ವಿರುದ್ಧ ಅತ್ಯಾಚಾರ ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಎಫ್‌ಐಆರ್‌ ದಾಖಲಿಸಿಕೊಳ್ಳಲಾಗಿದೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ಬಾಗಲಗುಂಟೆ ಪೊಲೀಸರು ತಿಳಿಸಿದರು.

ಪ್ರತಿಕ್ರಿಯಿಸಿ (+)