ಸೋಮವಾರ, ಜನವರಿ 18, 2021
15 °C

ಬ್ಲ್ಯಾಕ್‌ಮೇಲ್ ಮಾಡಿ ₹ 3 ಲಕ್ಷ ಕಿತ್ತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಹಿಳೆ ಜೊತೆಗಿನ ವಿಡಿಯೊ ಚಿತ್ರೀಕರಿಸಿ ಬ್ಲ್ಯಾಕ್‌ಮೇಲ್ ಮಾಡಿ ₹ 3 ಲಕ್ಷ ಕಿತ್ತ ಆರೋಪದಡಿ ಇಮ್ರಾನ್‌ ಎಂಬಾತನ ವಿರುದ್ಧ ದಕ್ಷಿಣ ವಿಭಾಗದ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಹಣ ಕಳೆದುಕೊಂಡಿರುವ 36 ವರ್ಷದ ಮಹಿಳೆ ದೂರು ನೀಡಿದ್ದಾರೆ. ಮಂಗಳೂರು ನಿವಾಸಿ ಎನ್ನಲಾದ ಇಮ್ರಾನ್ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದ್ದು, ಆತ  ತಲೆಮರೆಸಿಕೊಂಡಿದ್ದಾನೆ’ ಎಂದು ಪೊಲೀಸ್ ಮೂಲಗಳು ಹೇಳಿದರು.

‘ಎರಡು ವರ್ಷಗಳ ಹಿಂದೆ ಮಹಿಳೆ ಮೊಬೈಲ್‌ಗೆ ಅಪರಿಚಿತನಾಗಿ ಕರೆ ಮಾಡಿದ್ದ ಆರೋಪಿ, ‘ಪರಿಚಯಸ್ಥರೊಬ್ಬರ ಅಂಗಡಿಯಲ್ಲಿ ನಿಮ್ಮ ಮೊಬೈಲ್ ನಂಬರ್ ಸಿಕ್ಕಿತ್ತು. ಅದಕ್ಕೆ ಕರೆ ಮಾಡಿದೆ’ ಎಂದು ಚೆನ್ನಾಗಿ ಮಾತನಾಡಿದ್ದ. ಮಹಿಳೆಯೂ ಆತನ ಜೊತೆ ಮಾತನಾಡಿದ್ದರು. ಕೆಲ ದಿನಗಳ ನಂತರ ಆರೋಪಿ, ಮಹಿಳೆಗೆ ಕರೆ ಮಾಡಿದ್ದ. ತದನಂತರ ಇಬ್ಬರೂ ಸ್ನೇಹಿತರಾಗಿದ್ದರು. ವಾಟ್ಸ್‌ಆ್ಯಪ್‌ ಮೂಲಕವೂ ಸಂದೇಶ ಕಳುಹಿಸಲಾರಂಭಿಸಿದ್ದರು’ ಎಂದೂ ತಿಳಿಸಿದರು.

‘ಕೆಲ ದಿನಗಳ ಹಿಂದಷ್ಟೇ ವಿಡಿಯೊ ಕರೆ ಮಾಡಿದ್ದ ಆರೋಪಿ ಜೊತೆಯಲ್ಲಿ ಮಹಿಳೆ ಸಲುಗೆಯಿಂದ ಮಾತನಾಡಿದ್ದರು. ಅದೇ ವಿಡಿಯೊವನ್ನು ಚಿತ್ರೀಕರಿಸಿಕೊಂಡಿದ್ದ ಆರೋಪಿ, ಹಣಕ್ಕೆ ಬೇಡಿಕೆ ಇಟ್ಟಿದ್ದ. ಹಣ ಕೊಡದಿದ್ದರೆ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಮಾಡುವುದಾಗಿಯೂ ಬೆದರಿಸಿದ್ದ. ಮರ್ಯಾದೆಗೆ ಅಂಜಿದ್ದ ಮಹಿಳೆ, ಆತನಿಗೆ ₹ 3 ಲಕ್ಷ ಕೊಟ್ಟಿದ್ದರು. ಅದಾದ ನಂತರವೂ ಆರೋಪಿ ಹಣ ಕೇಳಲಾರಂಭಿಸಿದ್ದ. ನೊಂದ ಮಹಿಳೆ ಠಾಣೆಗೆ ಬಂದು ದೂರು ನೀಡಿದ್ದಾರೆ’ ಎಂದೂ ಹೇಳಿದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು