ಬೆಂಗಳೂರು: ಯುವತಿ ಸೋಗಿನಲ್ಲಿ ಪರಿಚಯ ಮಾಡಿಕೊಂಡಿದ್ದ ಆರೋಪಿಯೊಬ್ಬ, ನಗರದ ನಿವಾಸಿಯೊಬ್ಬರ ಖಾಸಗಿ ಫೋಟೊಗಳನ್ನು ಇಟ್ಟುಕೊಂಡು ಬ್ಲ್ಯಾಕ್ಮೇಲ್ ಮಾಡುತ್ತಿದ್ದಾನೆ. ಈ ಸಂಬಂಧ ಕೇಂದ್ರ ವಿಭಾಗದ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಪ್ಯಾಲೆಸ್ ಗುಟ್ಟಹಳ್ಳಿ ನಿವಾಸಿಯೊಬ್ಬರು ದೂರು ನೀಡಿದ್ದಾರೆ. ಅಪರಿಚಿತನ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.

‘ದೂರುದಾರ, ಖಾಸಗಿ ಕಂಪನಿ ನೌಕರ. ನಿದೀಶಾ ಪಟೇಲ್ ಹೆಸರಿನಲ್ಲಿ ಅವರಿಗೆ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿದ್ದ ಆರೋಪಿ, ಸ್ನೇಹ ಸಂಪಾದಿಸಿದ್ದ. ಬಳಿಕ, ಚಾಟಿಂಗ್ ಸಹ ಮಾಡಿದ್ದ. ಈ ಸಂಗತಿ ದೂರಿನಲ್ಲಿದೆ’ ಎಂದೂ ತಿಳಿಸಿದರು.

‘ದೂರುದಾರರ ಖಾಸಗಿ ಫೋಟೊ ಹಾಗೂ ವಿಡಿಯೊಗಳನ್ನು ಆರೋಪಿ ಪಡೆದುಕೊಂಡಿದ್ದ. ಅವುಗಳನ್ನು ಇಟ್ಟುಕೊಂಡು ₹ 21 ಸಾವಿರಕ್ಕೆ ಬೇಡಿಕೆ ಇಟ್ಟು ಬ್ಲ್ಯಾಕ್ಮೇಲ್ ಮಾಡಲಾರಂಭಿಸಿದ್ದ. ಹಣ ಕೊಡದಿದ್ದರೆ ಫೋಟೊ ಹಾಗೂ ವಿಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಸಿದ್ದ. ಹೆದರಿದ್ದ ದೂರುದಾರ, ಆರೋಪಿ ನೀಡಿದ್ದ ಖಾತೆಗೆ ₹ 7 ಸಾವಿರ ಹಣ ಹಾಕಿದ್ದ. ಬಳಿಕವೂ ಆರೋಪಿ ಹಣಕ್ಕಾಗಿ ಬೇಡಿಕೆ ಇಡುತ್ತಿದ್ದಾನೆ’ ಎಂದೂ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.