ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಹಕ ತಂದಿಟ್ಟಿದ್ದ ಬ್ಯಾಗ್‌ನಿಂದ ಸ್ಫೋಟ: ಕಚ್ಚಾ ಬಾಂಬ್ IED ಬಳಕೆ ಶಂಕೆ

Published 1 ಮಾರ್ಚ್ 2024, 12:41 IST
Last Updated 1 ಮಾರ್ಚ್ 2024, 12:41 IST
ಅಕ್ಷರ ಗಾತ್ರ

ಬೆಂಗಳೂರು: ದಿ ರಾಮೇಶ್ವರಂ ಕೆಫೆಯಲ್ಲಿ ಗ್ರಾಹಕನೊಬ್ಬ ತಂದಿಟ್ಟಿದ್ದ ಬ್ಯಾಗ್‌ನಿಂದ ಸ್ಫೋಟ ಸಂಭವಿಸಿರುವುದು ಮೇಲ್ನೋಟಕ್ಕೆ ಗೊತ್ತಾಗಿದ್ದು, ಅದೇ ಬ್ಯಾಗ್‌ನಲ್ಲಿ ಕಚ್ಚಾ ಬಾಂಬ್ (ಐಇಡಿ) ಇದ್ದಿರಬಹುದೆಂಬ ಶಂಕೆ ವ್ಯಕ್ತವಾಗಿದೆ.

ಕೆಫೆಯಲ್ಲಿ ಅಳವಡಿಸಿರುವ ಸಿ.ಸಿ.ಟಿ.ವಿ ಕ್ಯಾಮೆರಾ ಡಿವಿಆರ್ ಸುಪರ್ದಿಗೆ ಪಡೆದಿರುವ ಪೊಲೀಸರು, ದೃಶ್ಯಗಳನ್ನು ಪರಿಶೀಲಿಸುತ್ತಿದ್ದಾರೆ.

‘ಮಧ್ಯಾಹ್ನ 12.30ರ ಸುಮಾರಿಗೆ ಗ್ರಾಹಕನೊಬ್ಬ ಕ್ಯಾಷಿಯರ್ ಬಳಿ ಹೋಗಿದ್ದ. ಕ್ಯಾಷಿಯರ್ ಪಕ್ಕದಲ್ಲಿರುವ ಕಟ್ಟೆಯ ಮೇಲೆ ಬ್ಯಾಗ್ ಇರಿಸಿದ್ದ. ಇದಾದ ನಂತರ, ಕೆಲ ನಿಮಿಷಗಳ ನಂತರ ಸ್ಫೋಟ ಸಂಭವಿಸಿರುವುದು ಗೊತ್ತಾಗಿದೆ. ಆದರೆ, ಬ್ಯಾಗ್‌ನಲ್ಲಿ ಇರುವುದು ಕಚ್ಚಾ ಬಾಂಬ್‌ ಅಥವಾ ಬೇರೆ ಯಾವುದಾದರೂ ಸ್ಫೋಟಕ ಇರಬಹುದೆಂಬ ಅನುಮಾನವಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

‘ಸ್ಫೋಟ ಸಂಭವಿಸಿದ್ದ ಸ್ಥಳದಲ್ಲಿ ಬಿಳಿ ಬಣ್ಣದ ಪೌಡರ್, ಬೋಲ್ಟ್‌ ಹಾಗೂ ಬ್ಯಾಟರಿ ಪತ್ತೆಯಾಗಿದೆ. ಇವುಗಳನ್ನು ನೋಡಿದರೆ ಟಫಿನ್ ಬಾಕ್ಸ್ ಅಥವಾ ಬೇರೆ ರೀತಿಯಲ್ಲಿ ಕಚ್ಚಾ ಬಾಂಬ್ ಸಿದ್ಧಪಡಿಸಿರುವ ಬಗ್ಗೆ ಅನುಮಾನವಿದೆ. ಆದರೆ, ಯಾವುದಕ್ಕೂ ಸದ್ಯ ಖಚಿತತೆ ಇಲ್ಲ. ವಿಧಿವಿಜ್ಞಾನ ಪ್ರಯೋಗಾಲಯ ತಜ್ಞರ ವರದಿಯಿಂದಲೇ ನಿಖರ ಮಾಹಿತಿ ತಿಳಿಯಲಿದೆ’ ಎಂದು ಅಧಿಕಾರಿ ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT