ಭಾನುವಾರ, 10 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈಲ್ವೆ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ

Published 29 ಸೆಪ್ಟೆಂಬರ್ 2023, 15:49 IST
Last Updated 29 ಸೆಪ್ಟೆಂಬರ್ 2023, 15:49 IST
ಅಕ್ಷರ ಗಾತ್ರ

ಬೆಂಗಳೂರು: ನೈರುತ್ಯ ರೈಲ್ವೆಯ ಬೆಂಗಳೂರು ವಿಭಾಗದ ರೈಲ್ವೆ ಆಸ್ಪತ್ರೆಯಲ್ಲಿ ಗುರುವಾರ ರಕ್ತದಾನ ಶಿಬಿರ ನಡೆಯಿತು.

ಮಲ್ಲೇಶ್ವರಂ ವಾಲಂಟರಿ ಬ್ಲಡ್ ಬ್ಯಾಂಕ್ ಸಹಯೋಗದಲ್ಲಿ ನಡೆದ ರಕ್ತದಾನ ಶಿಬಿರವನ್ನು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಯೋಗೀಶ್ ಮೋಹನ್‌ ಉದ್ಘಾಟಿಸಿದರು. ರೈಲ್ವೆ ಆಸ್ಪತ್ರೆಯ ಮುಖ್ಯ ವೈದ್ಯಕೀಯ ಅಧೀಕ್ಷಕಿ ಡಾ. ಶೋಭಾ ಜಗನ್ನಾಥ್ ಇದ್ದರು.

ವೈದ್ಯಾಧಿಕಾರಿಗಳು, ರೈಲ್ವೆ ಆಸ್ಪತ್ರೆಯ ಸಿಬ್ಬಂದಿ, ಇತರ ವಿಭಾಗಗಳ ಸಿಬ್ಬಂದಿ, ಗುತ್ತಿಗೆ ಸಿಬ್ಬಂದಿ ಮತ್ತು ಆಸ್ಪತ್ರೆಯ ಸಂದರ್ಶಕರು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿದರು.

ಸ್ವಯಂಪ್ರೇರಿತ ಅಂಗದಾನ ಪ್ರತಿಜ್ಞೆಯನ್ನು ತೆಗೆದುಕೊಳ್ಳಲಾಯಿತು. ಕೆಲವು ಸ್ವಯಂಸೇವಕರು ಯಕೃತ್‌, ಮೂತ್ರಪಿಂಡ, ಕಣ್ಣು ಸಹಿತ ಪ್ರಮುಖ ಅಂಗಾಂಗಳನ್ನು ದಾನ ಮಾಡಲು ವಾಗ್ದಾನ ಮಾಡಿದರು. ದಾನಿಗಳಿಗೆ ಅಂಗದಾನ ಪ್ರತಿಜ್ಞೆ ಪ್ರಮಾಣಪತ್ರಗಳು ಮತ್ತು ರಕ್ತದಾನ ಪ್ರಮಾಣಪತ್ರಗಳನ್ನು ವಿತರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT