ಬೆಂಗಳೂರು: ರಾಮಯ್ಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸಂಸ್ಥೆಯ ರಾಷ್ಟ್ರೀಯ ಸೇವಾ ಯೋಜನಾ (ಎನ್ಎಸ್ಎಸ್) ಘಟಕ ಹಾಗೂ ವಿವಿಧ ರೋಟರಿ ಸಂಸ್ಥೆಗಳ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರದಲ್ಲಿ ಒಟ್ಟು 1,007 ಯೂನಿಟ್ ರಕ್ತ ಸಂಗ್ರಹಿಸಲಾಯಿತು.

ಶಿಬಿರ ಉದ್ಘಾಟಿಸಿ ಮಾತನಾಡಿದ ಈಶಾನ್ಯ ವಿಭಾಗದ ಡಿಸಿಪಿ ವಿ.ಜೆ. ಸಜೀತ್, ‘ಎನ್ಎಸ್ಎಸ್ ಮತ್ತು ಎನ್ಸಿಸಿ ಘಟಕಗಳ ವಿದ್ಯಾರ್ಥಿಗಳು ಗ್ರಾಮೀಣ ಭಾಗದಲ್ಲಿಯೂ ಶಿಬಿರಗಳನ್ನು ಹಮ್ಮಿಕೊಂಡರೆ ಅನುಭವ ಮತ್ತಷ್ಟು ಹೆಚ್ಚಳವಾಗಲಿದೆ’ ಎಂದು ಸಲಹೆ ನೀಡಿದರು.

ಗೋಕುಲ ಶಿಕ್ಷಣ ಪ್ರತಿಷ್ಠಾನದ ಉಪಾಧ್ಯಕ್ಷ ಎಂ.ಆರ್. ಸೀತಾರಾಂ ಮಾತನಾಡಿ, ‘ಎರಡು ದಶಕಗಳಲ್ಲಿ ಸಮಾಜದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಬೇರೆಯವರ ಬಗ್ಗೆ ಸಹನೆ, ಕಾಳಜಿ ಇಲ್ಲವಾಗಿದೆ. ಸ್ವಾರ್ಥ ಮನೋಭಾವ ಬೆಳೆದು ಸೇವಾ ಮನೋಭಾವ ಕ್ಷೀಣಿಸುತ್ತಿದೆ’ ಎಂದರು.

ಕಾಲೇಜಿನ ಒಂದು ಸಾವಿರ ವಿದ್ಯಾರ್ಥಿಗಳು ರಕ್ತದಾನ ಮಾಡಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಎಚ್.ವಿ. ಪಾರ್ಶ್ವನಾಥ್, ಹಣಕಾಸು ವಿಭಾಗದ ಮುಖ್ಯಸ್ಥ ಜಿ. ರಾಮಚಂದ್ರ, ಪ್ರಾಂಶುಪಾಲ ಎನ್.ವಿ.ಆರ್. ನಾಯ್ಡು ಮತ್ತು ಎನ್ಎಸ್ಎಸ್ ಘಟಕದ ಮುಖ್ಯಸ್ಥ ಪುಟ್ಟಬೋರೇಗೌಡ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.