ಭಾನುವಾರ, 24 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಎಂಐಸಿ: ರೈತರಿಗೆ ನಿವೇಶನ ನೀಡಲು ಒತ್ತಾಯ

Published 15 ಸೆಪ್ಟೆಂಬರ್ 2023, 14:40 IST
Last Updated 15 ಸೆಪ್ಟೆಂಬರ್ 2023, 14:40 IST
ಅಕ್ಷರ ಗಾತ್ರ

ಬೆಂಗಳೂರು: 'ಬೆಂಗಳೂರು–ಮೈಸೂರು ಇನ್‌ಫ್ರಾಸ್ಟ್ರಕ್ಚರ್‌ ಕಾರಿಡಾರ್‌ (ಬಿಎಂಐಸಿ) ಯೋಜನೆಗಾಗಿ ಜಮೀನು ಕಳೆದುಕೊಂಡ ರೈತರಿಗೆ ಪ್ರೋತ್ಸಾಹ ರೂಪದಲ್ಲಿ ಕೂಡಲೇ ನಿವೇಶನ ಹಂಚಿಕೆ ಮಾಡಬೇಕು’ ಎಂದು ಕರ್ನಾಟಕ ಸಂಘಟನೆಗಳ ಒಕ್ಕೂಟ ಆಗ್ರಹಿಸಿದೆ.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಕೆ.ಎನ್. ಲಿಂಗೇಗೌಡ, ‘ಬಿಎಂಐಸಿ ಯೋಜನೆಗಾಗಿ ಬೆಂಗಳೂರು ಉತ್ತರ ಮತ್ತು ದಕ್ಷಿಣ ತಾಲ್ಲೂಕಿನ ಹಲವಾರು ಗ್ರಾಮಗಳಲ್ಲಿ ಭೂಸ್ವಾಧೀನ ಪಡಿಸಿಕೊಳ್ಳಲಾಗಿತ್ತು. 2003ರ ಆ.22ರಂದು ನಡೆದ ಸಭೆಯಲ್ಲಿ ರೈತರಿಗೆ ಭೂಪರಿಹಾರ ನೀಡಲಾಗಿತ್ತು. ಇದರೊಂದಿಗೆ ನಿವೇಶನವನ್ನೂ ನೀಡುವ ಭರವಸೆ ನೀಡಲಾಗಿತ್ತು. ಅದನ್ನು ಇನ್ನೂ ಈಡೇರಿಸಿಲ್ಲ’ ಎಂದು ದೂರಿದರು.

‘ಬಿಎಂಐಸಿ ಯೋಜನೆ ಅಡಿಯಲ್ಲಿ ಸುಮಾರು 2 ಸಾವಿರ ನಿವೇಶನಗಳನ್ನು ಪ್ರೋತ್ಸಾಹದ ರೂಪದಲ್ಲಿ ಹಂಚಿಕೆ ಮಾಡಬೇಕಾಗಿದೆ. ಈ ಬಗ್ಗೆ ನೈಸ್‌ ಕಂಪನಿಯವರಿಗೆ ಕೇಳಿದರೆ ಸರ್ಕಾರದಿಂದ ನಮಗೆ ಅನುಮತಿ ಸಿಕ್ಕಿಲ್ಲ ಎಂಬ ಹೇಳಿಕೆ ನೀಡುತ್ತಿದ್ದಾರೆ. ಸರ್ಕಾರವು ಸಹ ರೈತರಿಗೆ ಸರಿಯಾದ ಮಾಹಿತಿ ನೀಡುತ್ತಿಲ್ಲ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT