ಬೆಂಗಳೂರು: ನಮ್ಮ ಮೆಟ್ರೊ ರೈಲು ಹೊಸ ಮಾರ್ಗದಲ್ಲಿ ಗ್ಯಾಸ್ ಪೈಪ್‌ಲೈನ್ ಸ್ಥಳಾಂತರ ವಿಳಂಬವಾಗುತ್ತಿದ್ದು, ಇದು ಸಿಲ್ಕ್ ಬೋರ್ಡ್‌ನಿಂದ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಮೆಟ್ರೊ ರೈಲು ಮಾರ್ಗದ ಕಾಮಗಾರಿಯ ವೇಗಕ್ಕೆ ತೊಡಕಾಗಿದೆ.

ಎರಡನೇ ಹಂತದ ಎ (ಸಿಲ್ಕ್ ಬೋರ್ಡ್–ಕೆ.ಆರ್.ಪುರ) ಮತ್ತು ಬಿ (ಕೆ.ಆರ್.ಪುರ–ವಿಮಾನ ನಿಲ್ದಾಣ) ಮೆಟ್ರೊ ರೈಲು ಮಾರ್ಗದ ಕಾಮಗಾರಿ ಹೊರ ವರ್ತುಲ ರಸ್ತೆಗಳಲ್ಲಿ ಭರದಿಂದ ಸಾಗಿದೆ. ಎರಡನೇ ಹಂತದ ಎ ಮಾರ್ಗದ ಕಾಡುಬೀಸನಹಳ್ಳಿ ಮತ್ತು ಬಿ ಮಾರ್ಗದ ಕೆ.ಆರ್.ಪುರ ಬಳಿ ಗ್ಯಾಸ್ ಪೈಪ್‌ಲೈನ್ ಸ್ಥಳಾಂತರ ಕಾಮಗಾರಿ ನಡೆಯುತ್ತಿದೆ.

2ಎ ಮಾರ್ಗದಲ್ಲಿ ಪೈಪ್‌ಲೈನ್ ಸ್ಥಳಾಂತರ ಕಾಮಗಾರಿಯನ್ನು 2021ರ ಸೆಪ್ಟೆಂಬರ್ ಮತ್ತು 2ಬಿ ಮಾರ್ಗದ ಕಾಮಗಾರಿಯನ್ನು ಅಕ್ಟೋಬರ್‌ನಲ್ಲಿ ಪೂರ್ಣಗೊಳಿಸಲಾಗುವುದು ಎಂದು ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಸಂಸ್ಥೆಯ(ಗೇಲ್) ಅಧಿಕಾರಿಗಳು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ನಡೆಯುವ ಉನ್ನತ ಅಧಿಕಾರಿ ಸಮಿತಿಯ ಸಭೆಯಲ್ಲಿ ಭರವಸೆ ನೀಡಿದ್ದರು. ಮೆಟ್ರೊ ರೈಲು ಯೋಜನೆಗೆ ಸಂಬಂಧಿಸಿದ 40, 41 ಮತ್ತು 42ನೇ ಸಭೆಗಳಲ್ಲೂ ಈ ವಿಷಯ ಪ್ರಸ್ತಾಪವಾಗಿತ್ತು.

ಏ.27ರಂದು 43ನೇ ಸಭೆ ನಡೆದಿದ್ದು, ಅಲ್ಲಿಯೂ ವಿಷಯ ಪ್ರಸ್ತಾಪವಾಗಿದೆ. ಕಾಡುಬೀಸನಹಳ್ಳಿ ಮತ್ತು ಕೆ.ಆರ್.ಪುರ ಬಳಿ ಗೇಲ್ ಇನ್ನೂ ಕಾಮಗಾರಿ ಪೂರ್ಣಗೊಳಿಸಿಲ್ಲ. ಆದ್ದರಿಂದ ಅಲ್ಲಿ ಮೆಟ್ರೊ ರೈಲು ಮಾರ್ಗದ ಕಾಮಗಾರಿ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ ಎಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ವಿವರಿಸಿದ್ದಾರೆ.

‘ಗೇಲ್ ಇನ್ನಷ್ಟು ವಿಳಂಬ ಮಾಡಿದರೆ ಮೇಟ್ರೊ ಮಾರ್ಗದ ಕಾಮಗಾರಿ ಮೇಲೆ ಪರಿಣಾಮ ಬೀರಲಿದೆ. ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸಿಕೊಡುವಂತೆ ಗೇಲ್‌ಗೆ ಸೂಚನೆ ನೀಡಬೇಕು’ ಎಂದು ಕೋರಿದ್ದಾರೆ.

ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಂಜುಂ ಪರ್ವೇಜ್, ‘ಈ ಬಗ್ಗೆ ಉನ್ನತ ಅಧಿಕಾರಿ ಸಮಿತಿ ಸಭೆಯಲ್ಲಿ ಚರ್ಚೆಯಾಗಿದೆ. ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸುವುದಾಗಿ ಗೇಲ್ ಹೇಳಿದೆ. ನಿಗದಿತ ಸಮಯದೊಳಗೆ ಯೋಜನೆ ಕಾರ್ಯಗತಗೊಳ್ಳಲಿದೆ’ ಎಂದು ಸ್ಪಷ್ಟಪಡಿಸಿದರು.

ಜಾಗ ಬಿಟ್ಟುಕೊಡಲು ಒಪ್ಪಿದ ಚರ್ಚ್
ರೀಚ್–6 ಮೆಟ್ರೊ ರೈಲು ಮಾರ್ಗಕ್ಕೆ ಅಲ್ಪ ಪ್ರಮಾಣದ ಜಾಗ ಬಿಟ್ಟುಕೊಡಲು ಹೊಸೂರು ರಸ್ತೆಯ ರಿಚ್‌ಮಂಡ್ ಟೌನ್ ಬಳಿಯ ಆಲ್ ಸೇಂಟ್ಸ್ ಚರ್ಚ್‌ನ ಮುಖ್ಯಸ್ಥರು ಒಪ್ಪಿಕೊಂಡಿದ್ದು, ನಾಲ್ಕು ವರ್ಷಗಳಿಂದ ಇದ್ದ ವಿವಾದ ಬಗೆಹರಿದಂತಾಗಿದೆ.

‘ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಂಜುಂ ಪರ್ವೇಜ್ ಅವರು ನಮ್ಮೊಂದಿಗೆ ಮಾತುಕತೆ ನಡೆಸಿದ್ದು, ಒಪ್ಪಂದದಂತೆ 218 ಚದರ ಮೀಟರ್ ಜಾಗ ನೀಡಲು ಒಪ್ಪಿದ್ದೇವೆ’ ಎಂದು ಚರ್ಚ್‌ನ ಎಬಿನೇಜರ್ ಪ್ರೇಮ್‌ಕುಮಾರ್ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.