ಶುಕ್ರವಾರ, ಸೆಪ್ಟೆಂಬರ್ 30, 2022
26 °C

ತಾಂತ್ರಿಕ ದೋಷ: ನಮ್ಮ ಮೆಟ್ರೊ ರೈಲು ಸಂಚಾರದಲ್ಲಿ ವ್ಯತ್ಯಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮೈಸೂರು ರಸ್ತೆ ಮತ್ತು ಕೆಂಗೇರಿ ನಡುವಿನ ಮೆಟ್ರೊ ರೈಲು ಮಾರ್ಗದಲ್ಲಿ(ನೇರಳೆ ಮಾರ್ಗ) ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.

ಒಂದೇ ಟ್ರ್ಯಾಕ್ ನಲ್ಲಿ 25ರಿಂದ 30 ನಿಮಿಷಕ್ಕೊಂದು ರೈಲು ಸಂಚರಿಸುತ್ತಿವೆ.  ತಾಂತ್ರಿಕ ದೋಷ ಸರಿಪಡಿಸಲು ನಿರ್ವಹಣಾ ತಂಡ ಪರಿಶೀಲನೆ ನಡೆಸುತ್ತಿದೆ. ಶೀಘ್ರದಲ್ಲೇ ಸಮಸ್ಯೆ ಸರಿಯಾಗಲಿದ್ದು, ರೈಲುಗಳ ಸಂಚಾರ ಸಹಜವಾಗಲಿದೆ ಎಂದು ಬಿಎಂಆರ್ ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.

ರೈಲು ಸಂಚಾರದಲ್ಲಿ ವ್ಯತ್ಯಯ ಆಗಿರುವುದರಿಂದ ಮೈಸೂರು ರಸ್ತೆಯಿಂದ ಕೆಂಗೇರಿ ತನಕದ ನಿಲ್ದಾಣಗಳಲ್ಲಿ ಪ್ರಯಾಣಿಕರು ರೈಲಿಗಾಗಿ ಕಾಯುತ್ತಿದ್ದಾರೆ. ಸಮಯಕ್ಕೆ ಸರಿಯಾಗಿ ಕಚೇರಿಗಳಿಗೆ ತೆರಳಲು ಸಾಧ್ಯವಾಗದೆ ಪರದಾಡುತ್ತಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು