ನಮ್ಮ ಮೆಟ್ರೊ: ಸಂಚಾರ ಸಮಯದಲ್ಲಿ ಮಹತ್ವದ ಬದಲಾವಣೆ, ಪ್ರಯಾಣಿಕರಿಗೆ ಸಿಹಿ ಸುದ್ದಿ

ಬೆಂಗಳೂರು: ಡಿಸೆಂಬರ್ 20ರಿಂದ ಮೆಟ್ರೊ ರೈಲುಗಳ ಸಂಚಾರ ಬೆಳಿಗ್ಗೆ 5 ಗಂಟೆಯಿಂದ ಆರಂಭಗೊಳ್ಳಲಿದೆ ಎಂದು ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್‌ಸಿಎಲ್) ತಿಳಿಸಿದೆ.
ಸೋಮವಾರದಿಂದ ಶನಿವಾರದವರೆಗೆ ಬೆಳಿಗ್ಗೆ 5 ಗಂಟೆಯಿಂದಲೇ ಮೆಟ್ರೊ ರೈಲುಗಳು ಸಂಚರಿಸಲಿವೆ. ಭಾನುವಾರ ಮಾತ್ರ ಬೆಳಿಗ್ಗೆ 7 ಗಂಟೆಯಿಂದ ಮೆಟ್ರೊ ಸೇವೆ ಇರಲಿದೆ.
ಸದ್ಯ ಬೆಳಿಗ್ಗೆ 6 ಗಂಟೆಯಿಂದ ಮೆಟ್ರೊ ಸೇವೆಗಳ ಕಾರ್ಯಾಚರಣೆ ಆರಂಭಗೊಳ್ಳುತ್ತಿತ್ತು.
ಹೊಸ ವೇಳಾಪಟ್ಟಿಯಿಂದ ನಾಗಸಂದ್ರ, ರೇಷ್ಮೆ ಸಂಸ್ಥೆ, ಕೆಂಗೇರಿ, ಬೈಯಪ್ಪನಹಳ್ಳಿಯಿಂದ ಮೊದಲ ರೈಲುಗಳು ಬೆಳಿಗ್ಗೆ 5 ಗಂಟೆಯಿಂದ ಹೊರಡಲಿವೆ. ಇದರಿಂದ ಸಾಕಷ್ಟು ಪ್ರಯಾಣಿಕರಿಗೆ ಅನುಕೂಲ ಆಗಲಿದೆ ಎನ್ನಲಾಗಿದೆ.
ಬೆಳಿಗ್ಗೆ 5 ರಿಂದ ಮೆಟ್ರೊ ಸೇವೆಯನ್ನು ಆರಂಭಿಸುವಂತೆ ಅನೇಕ ಪ್ರಯಾಣಿಕರು ಒತ್ತಾಯಿಸಿದ್ದರು. ದೂರದೂರುಗಳಿಂದ ಬೆಳಿಗ್ಗೆ ಬೆಂಗಳೂರಿಗೆ ಬಂದು ಮೆಟ್ರೊ ಮೂಲಕ ಕಚೇರಿ, ಮನೆ ತಲುಪವವರು 6 ಗಂಟೆಯವರೆಗೆ ಮೆಟ್ರೊ ನಿಲ್ದಾಣ ಕಾಯುವ ಪರಿಸ್ಥಿತಿ ಇತ್ತು. ಅಲ್ಲದೇ ಯಶವಂತಪುರ ಸೇರಿದಂತೆ ಅನೇಕ ಕಡೆ ಬೆಳಿಗ್ಗೆ 6ಕ್ಕೆ ಮೆಟ್ರೊಗಾಗಿ ಜನದಟ್ಟಣೆಯುಂಟಾಗುತ್ತಿತ್ತು.
‘ಎಲ್ಲ ಟರ್ಮಿನಲ್‌ಗಳಿಂದ ರಾತ್ರಿ 11 ಗಂಟೆಗೆ ಹಾಗೂ ನಾಡಪ್ರಭು ಕೆಂಪೇಗೌಡ ನಿಲ್ದಾಣದಿಂದ ರಾತ್ರಿ 11.30ಕ್ಕೆ ಕೊನೆಯ ರೈಲುಗಳು ಹೊರಡಲಿವೆ’ ಎಂದು ಪ್ರಕಟಣೆ ತಿಳಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.