ಶನಿವಾರ, 14 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು ಸಂತೆಗೆ ಬಿಎಂಆರ್‌ಸಿಎಲ್‌–ಎನ್‌ಎಲ್‌ಎಂ ಒಪ್ಪಂದ

Published : 7 ಆಗಸ್ಟ್ 2024, 23:31 IST
Last Updated : 7 ಆಗಸ್ಟ್ 2024, 23:31 IST
ಫಾಲೋ ಮಾಡಿ
Comments

ಬೆಂಗಳೂರು: ಇಲ್ಲಿನ ಸ್ವಾಮಿ ವಿವೇಕಾನಂದ ರಸ್ತೆಯಲ್ಲಿರುವ ಬೆಂಗಳೂರು ಸಂತೆಯಲ್ಲಿನ ಅಂಗಡಿಗಳನ್ನು ಪ್ರಾಯೋಗಿಕ ಯೋಜನೆಯಲ್ಲಿ ಒಂದು ವರ್ಷದ ಅವಧಿಗೆ ಬಾಡಿಗೆಗೆ ನೀಡಲು ಬಿಎಂಆರ್‌ಸಿಎಲ್‌ ಮತ್ತು ರಾಷ್ಟ್ರೀಯ ಜೀವನೋಪಾಯ ಮಿಷನ್ (ಎನ್‌ಎಲ್‌ಎಂ) ಒಪ್ಪಂದ ಮಾಡಿಕೊಂಡಿವೆ.

ಗ್ರಾಮೀಣ ಮತ್ತು ನಗರ ಪ್ರದೇಶದ ಮಹಿಳಾ ಉದ್ಯಮಿಗಳು, ಸ್ವ-ಸಹಾಯ ಗುಂಪುಗಳು ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಮತ್ತು ಪ್ರದರ್ಶಿಸಲು ಸಂತೆ ಮಾರುಕಟ್ಟೆಯನ್ನು ನಿರ್ಮಿಸಿದ್ದು, ಇದು ಮೊದಲ ಒಪ್ಪಂದವಾಗಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ, ಹುಡ್ಕೊ ಮತ್ತು ಬಿಎಂಆರ್‌ಸಿಎಲ್‌ ಸಂಯುಕ್ತವಾಗಿ ‘ಬೆಂಗಳೂರು ಸಂತೆ’ಯನ್ನು ಅಸ್ತಿತ್ವಕ್ಕೆ ತಂದಿವೆ. 

ಒಪ್ಪಂದದ ಸಂದರ್ಭದಲ್ಲಿ ಬಿಎಂಆರ್‌ಸಿಎಲ್‌ ವ್ಯವಸ್ಥಾಪಕ ನಿರ್ದೇಶಕ ಎಂ. ಮಹೇಶ್ವರ ರಾವ್, ರಾಷ್ಟ್ರೀಯ ಜೀವನೋಪಾಯ ಮಿಷನ್‌ನ ನಿರ್ದೇಶಕಿ ಪಿ.ಐ. ಶ್ರೀವಿದ್ಯಾ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT