ಮಂಗಳವಾರ, ಜನವರಿ 26, 2021
16 °C

ಜ.10ರಂದು ಮೆಟ್ರೊ ರೈಲು ಸಂಚಾರ ಭಾಗಶಃ ಸ್ಥಗಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ನಮ್ಮ ಮೆಟ್ರೊ’ ಹಸಿರು ಮಾರ್ಗದ ಬನಶಂಕರಿ ಮತ್ತು ಜಯನಗರ ನಿಲ್ದಾಣಗಳ ನಡುವೆ ದುರಸ್ತಿ ಕಾರ್ಯ ಕೈಗೆತ್ತಿಕೊಳ್ಳುತ್ತಿರುವುದರಿಂದ ನ್ಯಾಷನಲ್‌ ಕಾಲೇಜು ನಿಲ್ದಾಣದಿಂದ ಯಲಚೇನಹಳ್ಳಿಯವರೆಗೆ ಜ.10ರಂದು ಮೆಟ್ರೊ ರೈಲು ಸಂಚಾರ ಇರುವುದಿಲ್ಲ ಎಂದು ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್‌ಸಿಎಲ್‌) ಹೇಳಿದೆ.

ಈ ಎರಡು ನಿಲ್ದಾಣಗಳ ನಡುವೆ ಅಂದು ಬೆಳಿಗ್ಗೆ 7ರಿಂದ 9ರವರೆಗೆ, ಅಂದರೆ ಎರಡು ತಾಸು ಮಾತ್ರ ಸಂಚಾರ ಸ್ಥಗಿತಗೊಳ್ಳಲಿದೆ. ನ್ಯಾಷನಲ್‌ ಕಾಲೇಜು ನಿಲ್ದಾಣದಿಂದ ನಾಗಸಂದ್ರ ನಿಲ್ದಾಣದವರೆಗೆ ರೈಲು ಸೇವೆ ಎಂದಿನಂತಿರುತ್ತದೆ ಎಂದು ನಿಗಮ ಪ್ರಕಟಣೆಯಲ್ಲಿ ತಿಳಿಸಿದೆ.

ನೇರಳೆ ಮಾರ್ಗದಲ್ಲಿ ಮೆಟ್ರೊ ರೈಲುಗಳು ಎಂದಿನಂತೆ ಸಂಚರಿಸಲಿವೆ ಎಂದು ಬಿಎಂಆರ್‌ಸಿಎಲ್‌ ಹೇಳಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು