ಸುಧಾಮೂರ್ತಿ ಭಾಷಣ ನಾಳೆ

ಬೆಂಗಳೂರು: ಇನ್ಫೊಸಿಸ್ ಫೌಂಡೇಷನ್ ಮುಖ್ಯಸ್ಥೆ, ಲೇಖಕಿ ಡಾ. ಸುಧಾಮೂರ್ತಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಶುಕ್ರವಾರ ಮಾತನಾಡಲಿದ್ದಾರೆ.
ನಗರದ ಬಿಎಂಎಸ್ ಎಂಜಿನಿಯರಿಂಗ್ ಕಾಲೇಜಿನ 75ನೇ ಬ್ಯಾಚ್‌ನ ವಿದ್ಯಾರ್ಥಿಗಳನ್ನು ಕುರಿತು ಫೆ.12ರಂದು ಬೆಳಿಗ್ಗೆ 11ಕ್ಕೆ ಆನ್‌ಲೈನ್ ಮೂಲಕ ಅವರು ಮಾತನಾಡಲಿದ್ದಾರೆ ಎಂದು ಕಾಲೇಜು ಪ್ರಕಟಣೆ ತಿಳಿಸಿದೆ.
ಎಂಜಿನಿಯರಿಂಗ್ ವಿಷಯದ ಶಿಕ್ಷಕಿಯಾಗಿ, ಕನ್ನಡ, ಇಂಗ್ಲಿಷ್ ಹಾಗೂ ಮರಾಠಿ ಕೃತಿಗಳ ಲೇಖಕರಾಗಿಯೂ ಗುರುತಿಸಿಕೊಂಡಿರುವ ಸುಧಾಮೂರ್ತಿಯವರ ಕೃತಿಗಳು ದೇಶದ ಎಲ್ಲ ಪ್ರಮುಖ ಭಾಷೆಗಳಿಗೆ ಭಾಷಾಂತರಗೊಂಡಿವೆ. 30 ಲಕ್ಷಕ್ಕೂ ಹೆಚ್ಚು ಪ್ರತಿಗಳು ಮಾರಾಟವಾಗಿರುವುದು ಅವರ ಜನಪ್ರಿಯತೆಗೆ ಸಾಕ್ಷಿ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.