ಪೊಲೀಸ್, ಆರೋಗ್ಯ ಇಲಾಖೆ ಸಿಬ್ಬಂದಿ, ಪೌರ ಕಾರ್ಮಿಕರು, ಆಶಾ ಕಾರ್ಯಕರ್ತೆಯರಿಗೆ ಸರ್ಕಾರ ವಿಶೇಷ ಭತ್ಯೆ ನೀಡಿದ್ದು, ಅದೇ ಮಾದರಿಯಲ್ಲಿ ಬಿಎಂಟಿಸಿ ಸಿಬ್ಬಂದಿಗೂ ಭತ್ಯೆ ನೀಡಬಹುದು ಎಂಬ ಪ್ರಸ್ತಾವನೆಯನ್ನು ಸಂಸ್ಥೆಯ ಆಡಳಿತ ಮಂಡಳಿ ಅನುಮೋದಿಸಿದೆ. ಈ ನೌಕರರಿಗೆ ಭತ್ಯೆ ನೀಡಲು₹95.92 ಲಕ್ಷ ಮೊತ್ತ ನಿಗದಿ ಮಾಡಲಾಗಿದೆ ಎಂದು ಬಿಎಂಟಿಸಿ ತಿಳಿಸಿದೆ.