ಬಿಎಂಟಿಸಿ: 60 ಸಾವಿರ ವಿದ್ಯಾರ್ಥಿಗಳಿಗೆ ಪಾಸ್ ವಿತರಣೆ

ಶುಕ್ರವಾರ, ಜೂಲೈ 19, 2019
24 °C

ಬಿಎಂಟಿಸಿ: 60 ಸಾವಿರ ವಿದ್ಯಾರ್ಥಿಗಳಿಗೆ ಪಾಸ್ ವಿತರಣೆ

Published:
Updated:

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು (ಬಿಎಂಟಿಸಿ) ಈ ವರ್ಷ ಇಲ್ಲಿಯವರೆಗೆ ₹60 ಸಾವಿರ ವಿದ್ಯಾರ್ಥಿಗಳಿಗೆ ಬಸ್‌ ಪಾಸ್‌ ವಿತರಿಸಿದೆ.

ಪಾಸುಗಳನ್ನು ಸಂಸ್ಥೆಯ 15 ಬಸ್ ನಿಲ್ದಾಣಗಳಲ್ಲಿ 66 ಕೌಂಟರ್‌ಗಳ ಮೂಲಕ ವಿತರಣೆ ಮಾಡಲಾಗುತ್ತಿದೆ. ಇಲ್ಲಿಯವರೆಗೂ 1.54 ಲಕ್ಷ ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಸರಿಯಾದ ಮಾಹಿತಿ ಸಲ್ಲಿಸದ ಕಾರಣ 20,662 ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ಸರಿಯಾದ ಕ್ರಮದಲ್ಲಿ ಅರ್ಜಿ ಸಲ್ಲಿಸುವಂತೆ ಎಸ್ಎಂಎಸ್/ಇ-ಮೇಲ್ ಮೂಲಕ ತಿಳಿಸಲಾಗಿದೆ.

26,668 ಅರ್ಜಿಗಳು ಶಿಕ್ಷಣ ಸಂಸ್ಥೆಗಳಿಂದ ಅನುಮೋದನೆಯಾಗಬೇಕಾಗಿದ್ದು, ಈ ಅರ್ಜಿಗಳನ್ನು ಶಿಕ್ಷಣ ಸಂಸ್ಥೆಗಳಿಂದ ಅನುಮೋದಿಸುವಂತೆ ಈಗಾಗಲೇ ಇ-ಮೇಲ್ ಮೂಲಕ ಸಂಸ್ಥೆಯು ಕೋರಿದೆ. 46,768 ವಿದ್ಯಾರ್ಥಿಗಳ ಅರ್ಜಿಗಳನ್ನು ಅನುಮೋದಿಸಿದ್ದು, ವಿದ್ಯಾರ್ಥಿಗಳು ಪಾಸು ಪಡೆಯುವ ವೇಳೆ, ದಿನಾಂಕ, ಸ್ಥಳವನ್ನು ನಿಗದಿಪಡಿಸಿಕೊಂಡು ಪಾಸನ್ನು ಪಡೆಯಲು ಕೋರಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !